Webdunia - Bharat's app for daily news and videos

Install App

ಡ್ರಗ್ಸ್ ಪ್ರಕರಣ: ತಮಿಳು ನಟ ನಟ ಶ್ರೀಕಾಂತ್‌ಗೆ ಜು.7ರ ವರೆಗೆ ನ್ಯಾಯಾಂಗ ಬಂಧನ

Sampriya
ಮಂಗಳವಾರ, 24 ಜೂನ್ 2025 (17:57 IST)
ನವದೆಹಲಿ: ಡ್ರಗ್ಸ್‌ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ತಮಿಳು ನಟ ಶ್ರೀಕಾಂತ್‌ಗೆ ಸಂಕಷ್ಟ ಎದುರಾಗಿದೆ. ಬಂಧನದ ಬಳಿಕ ಎಂಟು ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಪೊಲೀಸರು ನಟನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

ಜುಲೈ 7ರ ವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದು, ಡ್ರಗ್ಸ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಶ್ರೀಕಾಂತ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. 

ಮಾಹಿತಿ ನೀಡಿದ ಪೊಲೀಸರು, ಶ್ರೀಕಾಂತ್ ಅವರ ರಕ್ತದ ಮಾದರಿಗಳನ್ನು ಕಿಲ್ಪಾಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಹೇಳಿದರು. 

ಸೋಮವಾರ ರಾತ್ರಿ ಶ್ರೀಕಾಂತ್‌ನನ್ನು ಎಗ್ಮೋರ್‌ನಲ್ಲಿರುವ 14ನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಿವಾಸದಲ್ಲಿ ವಶಕ್ಕೆ ಪಡೆಯಲಾಯಿತು. ಇದೀಗ ಅವರನ್ನು ಜುಲೈ 7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶ್ರೀಕಾಂತ್‌ಗೆ ಡ್ರಗ್ಸ್ ಸರಬರಾಜು ಮಾಡಿರುವುದಾಗಿ ಪ್ರಸಾದ್ ತಪ್ಪೊಪ್ಪಿಕೊಂಡಿದ್ದಾನೆ

ಎಐಎಡಿಎಂಕೆ ಮಾಜಿ ಸದಸ್ಯನನ್ನು ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಿದಾಗ ಈ ತನಿಖೆ ಪ್ರಾರಂಭವಾಯಿತು. ವಿಚಾರಣೆ ವೇಳೆ ಶ್ರೀಕಾಂತ್‌ಗೆ ಡ್ರಗ್ಸ್ ಸರಬರಾಜು ಮಾಡಿದ್ದನ್ನು ಪ್ರಸಾದ್ ಒಪ್ಪಿಕೊಂಡಿದ್ದಾನೆ. 

ಎಐಎಡಿಎಂಕೆಯಿಂದ ಉಚ್ಛಾಟಿತರಾಗಿರುವ ಪ್ರಸಾದ್ ಅವರಿಂದ ಡ್ರಗ್ಸ್ ಖರೀದಿಸಿ ಸೇವಿಸಿದ ಆರೋಪ ಶ್ರೀಕಾಂತ್ ಮೇಲಿದೆ. ಇದಾದ ಬಳಿಕ ಚೆನ್ನೈ ಪೊಲೀಸರು ಶ್ರೀಕಾಂತ್‌ನನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments