Webdunia - Bharat's app for daily news and videos

Install App

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Sampriya
ಬುಧವಾರ, 11 ಜೂನ್ 2025 (15:03 IST)
Photo Courtesy X
ಹೈದರಾಬಾದ್:‌ ಬಹುಭಾಷಾ ಗಾಯಕಿ ಮಂಗ್ಲಿ ಅವರ ಬರ್ತ್‌ ಡೇ ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಮಂಗ್ಲಿ ಮತ್ತು ರೆಸಾರ್ಟ್ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೈದರಾಬಾದ್​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಹಲವರು ಭಾಗಿಯಾಗಿದ್ದರು. ಮ್ಯೂಸಿಕ್‌ , ಡಿಂಕ್ಸ್‌ ಒಳಗೊಂಡಂತೆ ಬಲು ಜೋರಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಮಂಗ್ಲಿಯ ಸ್ನೇಹಿತರು ಕೆಲ ನಟ ನಟಿಯರು ಸೇರಿದಂತೆ 48 ಜನರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ತಡರಾತ್ರಿ ಪೊಲೀಸರು ಮಂಗ್ಲಿ ಅವರ ಪಾರ್ಟಿಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಮಾದಕ ವಸ್ತುಗಳು ಪತ್ತೆಯಾಗಿದೆ. ಇದಲ್ಲದೆ ಸ್ಥಳದಲ್ಲಿ ವಿದೇಶಿ ಮದ್ಯ  ಕೂಡ ಪತ್ತೆಯಾಗಿದೆ. ವಿದೇಶಿ ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ದಾಳಿಯ ವೇಳೆ ಪೊಲೀಸರು ವಿಡಿಯೋ ರೆಕಾರ್ಡ್‌ ಮಾಡಿದ್ದು, ಇದನ್ನು ನೋಡಿದ ಮಂಗ್ಲಿ ಪೊಲೀಸರ ಕರ್ತವ್ಯ ಅಡ್ಡಿಪಡಿಸಿದ್ದಾರೆ ಎನ್ನಲಾಗುತ್ತಿದೆ.

ಪಾರ್ಟಿಯಲ್ಲಿದ್ದವರ ರಕ್ತದ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಲಾಗಿದೆ. 9 ಮಂದಿ ಗಾಂಜಾ ಸೇವಿಸಿರುವುದು ದೃಢವಾಗಿದೆ ಎಂದು ವರದಿ ತಿಳಿಸಿದೆ. ಅವರ ವಿರುದ್ಧ ಎನ್‌ಡಿಪಿಎಸ್‌ ಮತ್ತು ಸೌಂಡ್ ಪೊಲ್ಯೂಷನ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ