ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಆಗ್ರಹ ಮಾಡುತ್ತಿರುವ ಪ್ರಮುಖರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರಾಗಿದ್ದಾರೆ.
ಪ್ರತಿಭಾವಂತ ನಟ ಸುಶಾಂತ್ ಸಿಂಗ್ ಪ್ರಕರಣದ ಬಗ್ಗೆ ಹಾಗೂ ಬಾಲಿವುಡ್ ನಲ್ಲಿ ಡ್ರಗ್ ಮಾಫಿಯಾ ಬಗ್ಗೆ ಬಾಲಿವುಡ್ ನ ಹಿರಿಯ ನಟರು ಏಕೆ ಮೌನವಾಗಿದ್ದಾರೆ ಎಂದು ನಟಿ ಕಂಗನಾ ರಣಾವತ್ ಕೇಳಿದ್ದಾರೆ.
ಸಿನಿಮಾ ಉದ್ಯಮದಲ್ಲಿ ಡ್ರಗ್ ಮಾಫಿಯಾ ಕುರಿತು ಮಾತನಾಡಿದ ಕಂಗನಾ, ಕೆಲವು ರಾಜಕಾರಣಿಗಳು ಮತ್ತು ಪೊಲೀಸರು ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾದೊಂದಿಗೆ ಭಾಗಿಯಾಗಿರುವ ಜನರೊಂದಿಗೆ ಸ್ನೇಹಿತರಾಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.