Publish Date: Thu, 18 Nov 2021 (16:40 IST)
Updated Date: Thu, 18 Nov 2021 (16:50 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ರುದ್ರಪ್ಪರನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಂದೆಯ ಅಗಲುವಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ದುನಿಯಾ ವಿಜಯ್ ತಾಯಿ ಅನಾರೋಗ್ಯದಿಂದ ತೀರಿಕೊಂಡಿದ್ದರು. ಇದೀಗ ತಂದೆ ತೀರಿಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.