Publish Date: Thu, 07 Oct 2021 (08:30 IST)
Updated Date: Thu, 07 Oct 2021 (08:41 IST)
ಬೆಂಗಳೂರು: ತಾವು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಸಲಗ ಸಿನಿಮಾವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ದುನಿಯಾ ವಿಜಯ್ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ.
ಅಕ್ಟೋಬರ್ 14 ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ. ಇದಕ್ಕಾಗಿ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನ ನೀಡಲಾಗಿದೆ.
ಇದೀಗ ಚಿತ್ರದ ಟ್ರೈಲರ್ ನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೂಲಕ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಇದಕ್ಕಾಗಿ ಈಗಾಗಲೇ ಖುದ್ದು ದುನಿಯಾ ವಿಜಿ ಪವರ್ ಸ್ಟಾರ್ ಗೆ ಆಹ್ವಾನ ನೀಡಿದ್ದಾರೆ. ಸದ್ಯದಲ್ಲೇ ದಿನಾಂಕ ಪ್ರಕಟವಾಗಲಿದೆ.