ಬೆಂಗಳೂರು: ಏಪ್ರಿಲ್ 7 ರ ಬಳಿಕ ಥಿಯೇಟರ್ ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರ ನಟ, ನಿರ್ದೇಶಕ ದುನಿಯಾ ವಿಜಯ್ ಅಸಮಾಧಾನಕ್ಕೆ ಗುರಿಯಾಗಿದೆ.
ಯುವರತ್ನ ಚಿತ್ರತಂಡ ಮನವಿ ಮಾಡಿದ ಬಳಿಕ ಮೂರು ದಿನ ಶೇ.100 ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದೆ. ಆದರೆ ಅದಾದ ಬಳಿಕ ಶೇ.50 ಪ್ರೇಕ್ಷಕರಿಗೆ ಮಾತ್ರ ಅನುಮತಿಯಿದೆ. ಹೀಗಾಗಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡದೇ ಸಲಗ ಸಿನಿಮಾ ರಿಲೀಸ್ ಮಾಡಲ್ಲ ಎಂದು ದುನಿಯಾ ವಿಜಯ್ ಹೇಳಿದ್ದಾರೆ.
ದುನಿಯಾ ವಿಜಿ ಮೊದಲ ಬಾರಿಗೆ ನಿರ್ದೇಶಿಸಿರುವ ಸಲಗ ಸಿನಿಮಾ ಏಪ್ರಿಲ್ 15 ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ದುನಿಯಾ ವಿಜಯ್ ಹೇಳಿಕೆ ಗಮನಿಸಿದರೆ ಅದೀಗ ಬಿಡುಗಡೆಯಾಗುವುದು ಅನುಮಾನವಾಗಿದೆ. ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರುವವರೆಗೆ ನಮ್ಮ ಸಿನಿಮಾ ರಿಲೀಸ್ ಮಾಡಲ್ಲ ಎಂದು ವಿಜಿ ಹೇಳಿದ್ದಾರೆ.