ಹಿರಿಯ ನಟ ದ್ವಾರಕೀಶ್ ಗೆ ಇಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Krishnaveni K
ಬುಧವಾರ, 17 ಏಪ್ರಿಲ್ 2024 (09:15 IST)
ಬೆಂಗಳೂರು: ನಿನ್ನೆ ನಮ್ಮನ್ನಗಲಿದ ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ಇಂದು ಸರ್ಕಾರೀ ಗೌರವಗಳೊಂದಿಗೆ ನೆರವೇರಲಿದೆ. ಈ ಕಾರ್ಯಕ್ರಮವನ್ನು ಸಾರ್ವಜನಿಕರಿಗೂ ವೀಕ್ಷಣೆಗೆ ಅವಕಾಶವಿದೆ.

ಇಂದು ಬೆಂಗಳೂರಿನ ಚಾಮರಾಜನಗರದಲ್ಲಿರುವ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈಗಾಗಲೇ ಅವರ ಪುತ್ರ ದ್ವಾರಕೀಶ್ ನಿವಾಸದಲ್ಲಿ ಪಾರ್ಥಿವ ಶರೀರಕ್ಕೆ ಬ್ರಾಹ್ಮಣ ಸಂಪ್ರದಾಯದಂತೆ ಪೂಜೆ ನೆರವೇರಿಸಿದ್ದಾರೆ. ಇದಾದ ಬಳಿಕ ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಅನುಕೂಲ ಕಲ್ಪಿಸಲಾಗಿದೆ.

ರವೀಂದ್ರ ಕಲಾಕ್ಷೇತ್ರದಿಂದ ಚಿತಾಗಾರಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತದೆ.  ಇಲ್ಲಿ ಅವರ ಐವರು ಪುತ್ರರು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ಕ್ರಿಯೆ ನೆರವೇರಿಸಲಿದ್ದಾರೆ. ದ್ವಾರಕೀಶ್ ಹೆಸರಾಂತ ನಟನಾಗಿದ್ದು, ಅವರ ಅಂತಿಮ ವಿಧಿವಿಧಾನಗಳು ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಇಂದು ಡಿಸಿಎಂ ಡಿಕೆ ಶಿವಕುಮಾರ್ ಅಂತಿಮ ದರ್ಶನ ಪಡೆಯಲಿದ್ದಾರೆ. ಅಲ್ಲದೆ, ಚಿತ್ರರಂಗದ ಮತ್ತಷ್ಟು ಗಣ್ಯರು ಇಂದು ಅಂತಿಮ ದರ್ಶನ ಪಡೆಯುವ ಸಾಧ‍್ಯತೆಯಿದೆ. ದ್ವಾರಕೀಶ್ ಗೌರವಾರ್ಥ ಇಂದು ಮಧ್ಯಾಹ್ನವರೆಗೆ ಚಿತ್ರಮಂದಿರ ಬಂದ್ ಮಾಡಿ ಗೌರವ ಸಲ್ಲಿಸಲಾಗುತ್ತಿದೆ.

ನಟ ದರ್ಶನ್, ಶಿವರಾಜ್ ಕುಮಾರ್, ಸುಂದರ್ ರಾಜ್, ಮೇಘನಾ ರಾಜ್, ಭವ್ಯಾ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಈಗಾಗಲೇ ಅಂತಿಮ ದರ್ಶನ ಪಡೆದಿದ್ದಾರೆ. ಸದ್ಯಕ್ಕೆ ಕಿಚ್ಚ ಸುದೀಪ್ ಚೆನ್ನೈನಲ್ಲಿ ಶೂಟಿಂಗ್ ನಲ್ಲಿದ್ದು ಅವರೂ ಇಂದು ಬೆಂಗಳೂರಿಗೆ ಬಂದು ಅಂತಿಮ ದರ್ಶನ ಪಡೆಯುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments