ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ತಮ್ಮ ಬಗ್ಗೆ ಹರಿದಾಡುತ್ತಿದ್ದ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದಾರೆ.
ಹಿರಿಯ ನಟ ದ್ವಾರಕೀಶ್ ಕೆಲವು ದಿನಗಳ ಮೊದಲು ಅನಾರೋಗ್ಯಕ್ಕೀಡಾಗಿದ್ದರು. ಇದೀಗ ಅವರು ಸಾವನ್ನಪ್ಪಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದರು.
ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದು, ತಾವು ಆರೋಗ್ಯವಾಗಿದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.