ಗೋವಾದಲ್ಲಿ ನಡೆದ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (IFFI) 2025 ರ ಸಮಾರೋಪ ಸಮಾರಂಭದಲ್ಲಿ ರಿಷಬ್ ಶೆಟ್ಟಿಯವರ ಕಾಂತಾರ: ಅಧ್ಯಾಯ 1 ರ ಪ್ರಮುಖ ದೃಶ್ಯದ ಅನುಕರಣೆ ಮಾಡಿ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಈ ಬಗ್ಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ರಿಷಬ್ ಶೆಟ್ಟಿ ಎದುರೇ ರಣವೀರ್ ಸಿಂಗ್ ಅವರು ದೈವದ ಅನುಕರಣೆ ಮಾಡಿ, ಹೆಣ್ಣು ದೆವ್ವ ಎಂದು ಹೇಳಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ರಣವೀರ್ ಸಿಂಗ್ ಅನುಕರಣೆ ಹಾಗೂ ರಿಷಬ್ ಶೆಟ್ಟಿ ಅದಕ್ಕೆ ನಕ್ಕಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಈ ಸಂಬಂಧ ಇದೀಗ ರಣವೀರ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಸ್‌ನಲ್ಲಿ ಬರೆದುಕೊಂಡಿದ್ದಾರೆ.
ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರಿಗಾದರೂ ಭಾವನೆಗಳನ್ನು ನೋಯಿಸಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.