ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ ಕುಟುಂಬದಲ್ಲಿ ಬಿರುಗಾಳಿ ಎದ್ದಿದೆ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಇದಕ್ಕೆ ಕಾರಣ ಅವರ ಮಾವ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡು, ಬರೆದುಕೊಂಡಿರುವ ವಾಕ್ಯ.
ಗೌತಮಿ ಬಿಗ್‌ಬಾಸ್ ಮನೆಯಲ್ಲಿದ್ದಾಗ ಅವರ ಪತಿ ಅಭಿಷೇಕ್ ಅವರು ಬಂದು, 6ವರ್ಷದ ಮದುವೆ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದರು. ಅದಲ್ಲದೆ ಎಲಿಮಿನೇಷನ್ ಆದಾಗಲೂ ಅಭಿಷೇಕ್ ಅವರು ಬಿಗ್‌ಬಾಸ್ ವೇದಿಕೆಗೆ ಬಂದಿದ್ದರು. ಗೌತಮಿ ಅವರು ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದ ಹಾಗೇ ಅವರನ್ನು ತಂದೆ, ತಾಯಿ, ಪತಿ ಹಾಗೂ ನಿರ್ದೇಶಕಿ ಸ್ವಪ್ನಾ ಅವರು ಅದ್ಧೂರಿಯಾಗಿ ಸ್ವಾಗತಿಸಿದ್ದರು
ಆದರೆ ಇದೀಗ ಗೌತಮಿ ಅವರ ಕುಟುಂಬದಲ್ಲಿ ಎಲ್ಲವೂ ಸರಿ ಇಲ್ವಾ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಕುಟುಂಬ ಅಂದರೆ ಗೌತಮಿ ಹಾಗೂ ಅಭಿಷೇಕ್ ಮಧ್ಯೆ ಅಲ್ಲ. ಗೌತಮಿ ಅವರ ಮಾವ, ಖ್ಯಾತ ಪತ್ರಕರ್ತ ಗಣೇಶ್ ಕಾಸರಗೋಡು ಅವರ ಫೇಸ್ ಬುಕ್ ಬರಹ ಇದೀಗ ಸಾಕಷ್ಟು ಕುತೂಹಲವನ್ನು ಮೂಡಿಸಿದೆ.
ಅಭಿಷೇಕ್ ತಂದೆ ಗಣೇಶ್ ಕಾಸರಗೋಡು ಅವರು, ಅನ್ಯಾಯದ ಬೇಡಿಕೆಯ ಪ್ರಾರ್ಥನೆಯನ್ನು ಮುಲಾಜಿಲ್ಲದೆ ಧಿಕ್ಕರಿಸುವ, ತಿರಸ್ಕರಿಸುವ ನಮ್ಮಮ್ಮ ವನದುರ್ಗೆಗೆ ನಮೋ ನಮಃ ಎಂದು ಬರೆದ ವಾಕ್ಯದ ಅರ್ಥ ಹಲವು ಅರ್ಥಗಳನ್ನು ಹುಟ್ಟುಹಾಕಿದೆ. .
ಅದಲ್ಲದೆ ನಿನ್ನೆ ಮತ್ತೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಗಣೇಶ್ ಅವರು, ಶ್ರಮ ಅರ್ಥವಾದರೆ ಅಪ್ಪ ಅರ್ಥವಾಗುತ್ತಾನೆ, ಕರುಣೆ ಅರ್ಥವಾದರೆ ತಾಯಿ ಅರ್ಥವಾಗುತ್ತಾಳೆ.ಶುಭ ಎಂದು ಪೋಸ್ಟ್ ಹಾಕಿ ಅದಕ್ಕೆ ಅಪ್ಪ ಅಮ್ಮನನ್ನು ಬಿಟ್ಟು ಕುರುಡು ಮೋಹಕ್ಕೆ ಮರುಳಾಗಿ ಹೆಂಡತಿಯ ಬಾಲ ಹಿಡಿದು ಹೊರಟು ಹೋಗುವ ನಿಯತ್ತಿಲ್ಲದ ಗಂಡು ಮಕ್ಕಳಿಗೆ ಅರ್ಪಣೆ ಎಂದು ಬರೆದಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.