ಒಳ್ಳೆಯತನದ ಎದುರು ಕೆಟ್ಟತನ ನಶ್ವರ: ವಿಜಯಲಕ್ಷ್ಮಿ ದರ್ಶನ್ ಫೋಸ್ಟ್ ಹಿಂದಿರುವ ಮರ್ಮವೇನು

Sampriya
ಶುಕ್ರವಾರ, 11 ಅಕ್ಟೋಬರ್ 2024 (19:13 IST)
ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ರೋಚಕ  ಘಟ್ಟಕ್ಕೆ ಬಂದು ತಲುಪಿದೆ. ವಾದ ಪ್ರತಿವಾದ ಅಂತ್ಯಗೊಂಡಿದ್ದು, ತೀರ್ಪನ್ನು ಸೋಮವಾರ(ಅಕ್ಟೋಬರ್ 14)ಕ್ಕೆ ಕಾಯ್ದಿರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೆ ದರ್ಶನ್ ಸಿನಿಮಾದ ಪೋಸ್ಟರ್‌ವೊಂದನ್ನು ವಿಜಯಲಕ್ಷ್ಮಿ ಹಂಚಿಕೊಂಡು, ಅಭಿಮಾನಿಗಳಿಗೆ ಪರೋಕ್ಷವಾಗಿ ಸಿಹಿ ಸುದ್ದಿ ನೀಡಿದ್ದಾರೆ.

ಶೀಘ್ರದಲ್ಲೇ ಅಭಿಮಾನಿಗಳ ಒತ್ತಾಯದ ಮೇರೆಗೆ ನವಗ್ರಹ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುವುದು ಎಂದು ನಿರ್ದೇಶಕ ದಿನಕರ್ ತೂಗುದೀಪ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಇದೀಗ ನವಗ್ರಹ ಸಿನಿಮಾ ಮರು ಬಿಡುಗಡೆಯಾಗುತ್ತಿರುವ ಮಾಹಿತಿ ಶೇರ್ ಮಾಡಿರುವ ವಿಜಯಲಕ್ಷ್ಮಿ ಅವರು ಏನೇ ಆಗಲಿ ಕೊನೆಯಲ್ಲಿ ಕೆಟ್ಟದು ಅಳಿದು ಹೋಗುತ್ತಸದೆ ಎಂದು ಬರೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಂ ಸ್ಟೋರಿಸ್‌ನಲ್ಲಿ ಪೋಸ್ಟರ್ ಹಂಚಿ ಬರೆದುಕೊಂಡಿರುವ ವಿಜಯಲಕ್ಷ್ಮಿ, ಪ್ರೀತಿಯ ಡಿಬಾಸ್ ಸೆಲೆಬ್ರಿಟಿಗಳೆ, ಎಲ್ಲರ ಹೃದಯದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ 'ನವಗ್ರಹ' ಸಿನಿಮಾ ಆದಷ್ಟು ಬೇಗ ಮರು ಬಿಡುಗಡೆ ಆಗಲಿದೆ. ಈ ಬಾರಿ ಸಿನಿಮಾ ನೋಡುವ ಅನುಭವ ಇನ್ನಷ್ಟು ಭಿನ್ನವಾಗಿರಲಿದೆ. ಈ ಸಿನಿಮಾವನ್ನು ನಿಮ್ಮ ಹತ್ತಿರದ ಚಿತ್ರಮಂದಿರದಲ್ಲಿ ತಪ್ಪದೆ ನೋಡಿ ಎಂದು ಬರೆದುಕೊಂಡಿದ್ದಾರೆ.

ಏನೇ ಆಗಲಿ ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ, ಒಳ್ಳೆತನಕ್ಕೆ ಜಯವಾಗುತ್ತದೆ ಎಂಬುದನ್ನು ತೋರಿಸಿಕೊಟ್ಟ ದಿನವಿದು. ಸದಾ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳೋಣ, ಆ ಚಾಮುಂಡೇಶ್ವರಿ ದೇವಿ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ದರ್ಶನ್ ಅವರು ಈ ಪ್ರಕರಣದಿಂದ ಬೇಗ ಹೊರಬರುವ ಮುನ್ಸೂಚನೆಯನ್ನು ಅಭಿಮಾನಿಗಳಿಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments