ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

Sampriya
ಸೋಮವಾರ, 27 ಅಕ್ಟೋಬರ್ 2025 (18:03 IST)
p
ಬೆಂಗಳೂರು: ತೆಲುಗು ನಟ ಚಿರಂಜೀವಿ ಅವರು ದಿಢೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ನಟನ ಮುಖವನ್ನು ಬಳಸಿ ಎಐ ಮೂಲಕ ಅಶ್ಲೀಲ ವಿಡಿಯೋ ಹರಿಬಿಟ್ಟ ಸಂಬಂಧ ನಟ ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ದೂರನ್ನು ನೀಡಿದ್ದಾರೆ. 

ಅಕ್ಟೋಬರ್ 27 ರಂದು ಸಲ್ಲಿಸಲಾದ ದೂರಿನಲ್ಲಿ, ಕೆಲವು ವೆಬ್‌ಸೈಟ್‌ಗಳಲ್ಲಿ ನಟನ ಎಐ ರಚಿತ ಅಶ್ಲೀಲ ವಿಡಿಯೋವನ್ನು ಬಿಡಲಾಗಿದೆ ಎಂದರು. 

ನಟನ ದೂರಿನಲ್ಲಿ ಕೃತಕ ವೀಡಿಯೋಗಳು ಸಾರ್ವಜನಿಕವಾಗಿ ತಮ್ಮ ಮೇಲೆ ತಪ್ಪು ಗ್ರಹಿಕೆ ಮೂಡಲು ಕಾರಣವಾಗಿದೆ. ನನ್ನ ಮೇಲಿರುವ ಸದ್ಭಾವನೆಯನ್ನು ವಿರೂಪಗಳಿಸುವ ದುರುದ್ದೇಶಪೂರಿತವಾಗಿ ಈ ರೀತಿ ಮಾಡಲಾಗಿದೆ ಎಂದಿದ್ದಾರೆ. 

`ಈ ವೀಡಿಯೊಗಳು ಸಂಪೂರ್ಣವಾಗಿ ನಕಲಿಯಾಗಿದ್ದು, ಕೃತಕ ಬುದ್ಧಿಮತ್ತೆ ಅಥವಾ `ಡೀಪ್‌ಫೇಕ್ ಅಶ್ಲೀಲತೆ’ ಬಳಸಿ ರಚಿಸಲಾಗಿದೆ. ನನ್ನ ಮುಖಭಾವ ಮತ್ತು ವ್ಯಕ್ತಿತ್ವವನ್ನು ಕಾನೂನುಬಾಹಿರವಾಗಿ ಅಶ್ಲೀಲ ವಿಷಯವಾಗಿ ಪರಿವರ್ತಿಸಲಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ. 

ತಪ್ಪಿತಸ್ಥರ ವಿರುದ್ಧ ಹೈದರಾಬಾದ್ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳೋರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಿದೆ.

ಸಿಕ್ಕಿರುವ ಮಾಹಿತಿ ಪ್ರಕಾರ, ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ, ಭಾರತೀಯ ನ್ಯಾಯ ಸಂಹಿತಾ ಮತ್ತು ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಕಾಂತಾರ ಚಾಪ್ಟರ್ 1 ರಲ್ಲಿ ಮಾಯಕಾರನಾಗಲು ಎಷ್ಟು ಕಷ್ಟಪಟ್ಟಿದ್ರು ರಿಷಬ್ ಶೆಟ್ಟಿ: Video

ಮುಂದಿನ ಸುದ್ದಿ
Show comments