Webdunia - Bharat's app for daily news and videos

Install App

ಕನ್ನಡದ ಖ್ಯಾತ ನಿರ್ದೇಶಕ, ರಂಗಭೂಮಿ ಕಲಾವಿದ ಟಿ.ಎಸ್.ರಂಗಾ ಇನ್ನಿಲ್ಲ!

Webdunia
ಸೋಮವಾರ, 9 ಏಪ್ರಿಲ್ 2018 (07:02 IST)
ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ, ರಂಗಭೂಮಿ ಕಲಾವಿದ ಟಿ.ಎಸ್.ರಂಗಾ ಅವರು ಬೆಂಗಳೂರಿನಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾರೆ.


 69 ವರ್ಷ ವಯಸ್ಸಿನ ಇವರು ಹಲವು ವರ್ಷಗಳಿಂದ ಅನಾರೋಗ್ಯದಿಂದ ನರಳುತ್ತಿದ್ದು, ಭಾನುವಾರದಂದು ಬೆಳಿಗ್ಗೆ ಬೆಂಗಳೂರಿನ ಎನ.ಆರ್.ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಇವರು ತಮ್ಮ ಪತ್ನಿ ಅಶ್ವಿನಿ, ಮಗಳು ತನ್ವಿತಾ, ಅಳಿಯ ಹಾಗೂ ಅವರ ಅಭಿಮಾನಿಗಳನ್ನು, ಶಿಷ್ಯವೃಂದದವರನ್ನು ಅಗಲಿದ್ದಾರೆ.


ಭಾನುವಾರ ಸಣಜೆ ಬೆಂಗಳೂರಿನಲ್ಲಿ ಮೃತರ ಅಂತ್ಯಕ್ರಿಯೆ ನಡೆದಿದ್ದು, ಹಿರಿಯ ನಟ ಸುಂದರ್ ರಾಜ್, ನಿರ್ದೇಶಕ ಟಿ.ಎಸ್.ನಾಗಾಭರಣ ಸೇರಿದಂತೆ ಸಿನಿಮಾ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದರು.


ಟಿ ಎಸ್ ರಂಗ ಅವರು ಸ್ಯಾಂಡಲ್ ವುಡ್ ನಲ್ಲಿ  'ಗೀಜಗನ ಗೂಡು' ಹಾಗೂ 'ಸಾವಿತ್ರಿ' ಸಿನಿಮಾವನ್ನ ನಿರ್ದೇಶನ ಮಾಡಿದ್ದು, 'ಗೀಜಗನ ಗೂಡು' ಇವರ ನಿರ್ದೇಶನದಲ್ಲಿ ಮೂಡಿ ಬಂದ ಕನ್ನಡದ ಮೊದಲ ಚಿತ್ರ. ಬಾಲಿವುಡ್ ನಲ್ಲಿ 'ಗಿಧ್' ಎಂಬ ಚಿತ್ರವನ್ನ ಡೈರೆಕ್ಟ್ ಮಾಡಿ ನ್ಯಾಷನಲ್ ಅವಾರ್ಡ್ ಕೂಡ ಪಡೆದುಕೊಂಡಿದ್ದರು. ಟಿ ಎಸ್ ನಾಗಾಭರಣ ಅವರು ನಿರ್ದೇಶನ ಮಾಡಿದ್ದ 'ಗ್ರಹಣ' ಚಿತ್ರಕ್ಕೆ ಚಿತ್ರಕಥೆ ಬರೆದು ಟಿ ಎಸ್ ರಂಗ ಅವರು ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಕೇವಲ ಸಿನಿಮಾರಂಗದಲ್ಲಿ ಮಾತ್ರವಲ್ಲದೆ ರಂಗಭೂಮಿಯಲ್ಲಿಯೂ ಟಿ ಎಸ್ ರಂಗ ಒಳ್ಳೆಯ ಹೆಸರು ಮಾಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments