ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿ ನೋಡಲು ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಈ ಹಿನ್ನಲೆಯಲ್ಲಿ ಬೆಳಗ್ಗಿನಿಂದಲೇ ಅಭಿಮಾನಿಗಳು ಕಂಠೀರವ ಸ್ಟುಡಿಯೋದತ್ತ ಹರಿದುಬರುತ್ತಿದ್ದಾರೆ. ವಿಶೇಷವಾಗಿ ಪುಟ್ಟ ಪುಟ್ಟ ಮಕ್ಕಳು, ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಕೆಲವರು ಅಪ್ಪು ಸಮಾಧಿ ಮುಂದೆ ಭಾವುಕರಾಗಿ ಕಣ್ಣೀರು ಹಾಕುವ ದೃಶ್ಯವೂ ಸಾಮಾನ್ಯವಾಗಿದೆ. ಬೆಳಿಗ್ಗೆಯಿಂದ ಸಂಜೆಯವರೆಗೂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.