ವಜ್ರಮುನಿಯಾಗಿ ಅವತಾರವೆತ್ತಿದ ಕೋಮಲ್‌ ಲುಕ್‌ಗೆ ಅಭಿಮಾನಿಗಳು ಫುಲ್ ಫಿದಾ

Sampriya
ಮಂಗಳವಾರ, 17 ಸೆಪ್ಟಂಬರ್ 2024 (19:24 IST)
Photo Courtesy X
ಬೆಂಗಳೂರು: ವಜ್ರಮುನಿಯಾಗಿ ಅವತಾರವೆತ್ತಿರುವ ಸೆನ್ಸೇಷನಲ್‌ ಸ್ಟಾರ್‌ ಕೋಮಲ್‌ ಅಭಿನಯದ ಯಲಾಕುನ್ನಿ ಸಿನಿಮಾದ ಟೀಸರ್‌ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೋಮಲ್ ನ್ಯೂ ಗೆಟಪ್ ನೋಡಿ ಅವರ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.

ಈ ಸಿನಿಮಾಗೆ ಎನ್.ಆರ್. ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕೋಮಲ್ ಅವರು ಶ್ರೀಕೃಷ್ಣನಾಗಿ, ವಜ್ರಮುನಿಯಾಗಿ ಅವತಾರ  ತಾಳಿದ್ದಾರೆ. ಚಿತ್ರಕ್ಕೆ 'ಮೇರಾ ನಾಮ್‌ ವಜ್ರಮುನಿ' ಎನ್ನುವ ಅಡಿಬರಹವಿದ್ದು, ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್‌ ಕುಮಾರ್, ಸಹನಾಮೂರ್ತಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇನ್ನೂ ಸಿನಿಮಾ ಶೀಘ್ರದಲ್ಲೇ ದೊಡ್ಡ ಪರದೆ ಮೇಲೆ ಬರಲಿದ್ದು, ಮೊದಲ ಬಾರಿ ಕೋಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ.ಆರ್. ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‌ಕರ್, ಮಾನಸಿ ಸುಧೀರ್, ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ, ಮಹಾಂತೇಶ್, ಜಯರಾಮ್ ಸೇರಿದಂತೆ ದೊಡ್ಡ ತಾರಾಬಳಗವನ್ನು ಹೊಂದಿದೆ.

ವಿಶೇಷ ಏನೆಂದರೆ ವಜ್ರಮುನಿ ಅವರ ಮೊಮ್ಮೊಗ ಆಕರ್ಷ್‌ ಈ ಚಿತ್ರದ ಮೂಲಕ ಚಂದನವನ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಖಳನಾಯಕನಾಗಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments