Webdunia - Bharat's app for daily news and videos

Install App

ಅಭಿಮಾನಿಗಳ ಆಶೀರ್ವಾದ ನನ್ನ ಮೇಲಿದೆ: ಪ್ರತಿಕ್ರಿಯೆ ನೀಡಿದ ಶಿವಣ್ಣ

Sampriya
ಬುಧವಾರ, 18 ಡಿಸೆಂಬರ್ 2024 (18:47 IST)
photo Courtesy Instagram
ಬೆಂಗಳೂರು:  ಮನೆ ಹತ್ತಿರ ಅಭಿಮಾನಿಗಳು ಬರುತ್ತಿದ್ದಾರೆ. ಅದನ್ನು ನೋಡಿ ಎಮೋಷನಲ್ ಆದೆ. ಈಗಾಗಲೇ ಹೆಲ್ತ್ ಚೆಕಪ್ ಮಾಡಿಸಿದ್ದು, ಎಲ್ಲವೂ ಸರಿಯಾಗಿದೆ. ಅಭಿಮಾನಿಗಳ ಆಶೀರ್ವಾದ ನನ್ನ ಮೇಲಿದೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು.

ಅಮೆರಿಕಾಕ್ಕೆ ಚಿಕಿತ್ಸೆಗೆ ತೆರಳುವ ಮುನ್ನಾ ಮಾಧ್ಯಮವದರ ಬಳಿ ಮಾತನಾಡಿದ ಅವರು, ಅಭಿಮಾನಿಗಳನ್ನು ನೋಡಿದಾಗ ದುಃಖ ಆಗುತ್ತದೆ. ಅದು ಬಿಟ್ಟರೆ ನಾನು ಧೈರ್ಯವಾಗಿದ್ದೀನಿ. ಡಿ. 24ರಂದು ನನಗೆ ಸರ್ಜರಿ ನಡೆಯುತ್ತಿದೆ. ಅದರ ಬಗ್ಗೆ ಪಾಸಿಟಿವ್ ಆಗಿದ್ದೀನಿ. ಈ ಬಗ್ಗೆ ನನಗೇನು ಯೋಚನೆ ಇಲ್ಲ ಎಂದು ಶಿವಣ್ಣ ಮಾತನಾಡಿದ್ದಾರೆ.

ಚಿಕಿತ್ಸೆಗಾಗಿ ಕೆಲವು ದಿನಗಳ ಕಾಲ ಮನೆಯಿಂದ ಆಚೆ ಇರುತ್ತೇವೆ. ಇದೇ ಮೊದಲ ಬಾರಿ ನಾನು ಮನೆಬಿಟ್ಟು ಒಂದು ತಿಂಗಳು ಇರುವುದು. ಇನ್ನೂ ಎಲ್ಲಾ ಅಭಿಮಾನಿಗಳ ಆಶೀರ್ವಾದ ನನ್ನ ಮೇಲಿದೆ. ಇದರಿಂದ ನನಗೆ ಖುಷಿ ಆಗುತ್ತಿದೆ. ಜ.26ಕ್ಕೆ ನಾನು ಬೆಂಗಳೂರಿಗೆ ಹಿಂದಿರುಗುತ್ತಿದ್ದೇನೆ ಎಂದರು.

ಸುದೀಪ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸುದೀಪ್ ಬಂದಿದ್ದು ಖುಷಿಯಾಯ್ತು. ಯಾರು ಯೋಚನೆ ಮಾಡುವಂತಹದ್ದು ಏನು ಇಲ್ಲ. ಎಲ್ಲವೂ ಸರಿಯಾಗಿದೆ ಎಂದು ತಿಳಿಸಿದರು. ನಂತರ 'ಯುಐ' ಮತ್ತು 'ಮ್ಯಾಕ್ಸ್' ಎರಡು ಸಿನಿಮಾಗಳು ರಿಲೀಸ್ ಆಗುತ್ತಿದೆ. ಎರಡು ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಶಿವಣ್ಣ ಶುಭಕೋರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments