Webdunia - Bharat's app for daily news and videos

Install App

ಮಧ್ಯ ರಾತ್ರಿಯಿಂದಲೇ ದರ್ಶನ್ ಮನೆ ಮುಂದೆ ಜನಸಾಗರ

Krishnaveni K
ಶುಕ್ರವಾರ, 16 ಫೆಬ್ರವರಿ 2024 (10:11 IST)
Photo Courtesy: Twitter
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬ ನಿಮಿತ್ತ ಅವರಿಗೆ ವಿಶ್ ಮಾಡಲು ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದಾರೆ.

ಮಧ‍್ಯರಾತ್ರಿಯಿಂದಲೇ ಅವರ ಮುಂದೆ ಜನಸಾಗರವೇ ಸೇರಿದೆ. ಈ ಮೊದಲೇ ದರ್ಶನ್ ತಮ್ಮ ಮನೆ ಮುಂದೆ ಬರುವ ಅಭಿಮಾನಿಗಳು ಇತರೆ ನಿವಾಸಿಗಳಿಗೆ ತೊಂದರೆ ಕೊಡಬಾರದು ಎಂದು ಮನವಿ ಮಾಡಿದ್ದರು. ಹಾಗಿದ್ದರೂ ಸಾಕಷ್ಟು ಜನ ದರ್ಶನ್ ರನ್ನು ನೋಡಲೇಬೇಕೆಂದು ಕಾದು ಕುಳಿತಿದ್ದರು.

ಇಂದು ಬೆಳಿಗ್ಗೆಯೂ ಜನ ಜಂಗುಳಿ ಮುಂದುವರಿದಿದೆ. ದರ್ಶನ್ ಅವರ ಫೋಟೋ ಇರುವ ಪ್ಲೇಕಾರ್ಡ್ ಗಳನ್ನು ಹಿಡಿದು ಜೈಕಾರ ಕೂಗುತ್ತಾ ಅಭಿಮಾನಿಗಳು ಸಂಬ್ರಮಿಸುತ್ತಿದ್ದಾರೆ. ದೂರದ ಊರುಗಳಿಂದ ಬಂದ ಅಭಿಮಾನಿಗಳು ಅವರು ನಮ್ಮ ಪ್ರತಿಯೊಬ್ಬರನ್ನೂ ಮಾತನಾಡಿಸದಿದ್ದರೂ ಬೇಡ, ಒಮ್ಮೆ ದರ್ಶನ ಕೊಟ್ಟರೆ ಸಾಕು ಎನ್ನುತ್ತಿದ್ದಾರೆ.

ದರ್ಶನ್ ಮನೆ ಸುತ್ತಮುತ್ತ ದೊಡ್ಡ ಕಟೌಟ್ ಹಾಕಿ ಶುಭ ಕೋರಲಾಗಿದೆ. ನಿನ್ನೆ ಮಧ‍್ಯರಾತ್ರಿಯೇ ಕಾಟೇರ ನಿರ್ದೇಶಕ ತರುಣ್ ಸುಧೀರ್ ದರ್ಶನ್ ನಿವಾಸಕ್ಕೆ ಬಂದು ಶುಭ ಕೋರಿದ್ದಾರೆ. ಜೊತೆಗೆ ಅವರ ಹೊಸ ಸಿನಿಮಾಗಳೂ ಘೋಷಣೆಯಾಗಿರುವುದರಿಂದ ಈ ಬಾರಿ ದರ್ಶನ್ ಹುಟ್ಟುಹಬ್ಬ ಅವರ ಅಭಿಮಾನಿಗಳ ಪಾಲಿಗೆ ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments