Publish Date: Sat, 30 Oct 2021 (13:09 IST)
Updated Date: Sat, 30 Oct 2021 (13:15 IST)
ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು, ಗಣ್ಯರಿಗೆ ಅವಕಾಶ ನೀಡಲಾಗುವುದು.
ಸಾರ್ವಜನಿಕರಿಗೆ ಅವಕಾಶ ಇಲ್ಲ. ಹೀಗಾಗಿ ಅಭಿಮಾನಿಗಳು ಸಂಯಮದಿಂದ ವರ್ತಿಸಬೇಕು. ಪುನೀತ್ ಪುತ್ರಿ ದೆಹಲಿ ತಲುಪಿದ ಬಳಿಕ ಉಳಿದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಮೆರವಣಿಗೆಯ ಬಗ್ಗೆ ಸಮಯ ನಿಗದಿಯಿಂದ ಹಿಡಿದು ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ನಿನ್ನೆ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಬಿಟ್ಟು ಅಗಲಿದರು. ಜನಸಾಗರವೇ ಹರಿದು ಬರುತ್ತಿದೆ. ಮುಂದಿನ ಕಾರ್ಯವೂ ಕೂಡಾ ಸುಗಮವಾಗಿ ಆಗಬೇಕು. ಪೊಲೀಸ್ ಇಲಾಖೆ, ಬಿಬಿಎಂಪಿ ಕಾರ್ಯಾಚರಣೆಯಲ್ಲಿ ಇದ್ದಾರೆ. ಮಧ್ಯಾಹ್ನ 1:30 ಕ್ಕೆ ಮತ್ತೆ ಇಲ್ಲಿಗೆ ಬರುತ್ತೇನೆ. ಅಪ್ಪು ಬಹಳ ಜನಪ್ರಿಯ ನಾಯಕ. ನಟ ಪುನೀತ್ ಅಗಲಿಕೆ ನಮಗೆ ತುಂಬಾ ದುಃಖವಾಗಿದೆ ಗೌರವ, ಶಾಂತಿಯಿಂದ ಅವರನ್ನು ಕಳಿಸಿಕೊಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ