ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು, ಗಣ್ಯರಿಗೆ ಅವಕಾಶ ನೀಡಲಾಗುವುದು.ಸಾರ್ವಜನಿಕರಿಗೆ ಅವಕಾಶ ಇಲ್ಲ. ಹೀಗಾಗಿ ಅಭಿಮಾನಿಗಳು ಸಂಯಮದಿಂದ ವರ್ತಿಸಬೇಕು. ಪುನೀತ್ ಪುತ್ರಿ ದೆಹಲಿ ತಲುಪಿದ ಬಳಿಕ ಉಳಿದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಮೆರವಣಿಗೆಯ ಬಗ್ಗೆ ಸಮಯ ನಿಗದಿಯಿಂದ ಹಿಡಿದು ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.