Publish Date: Tue, 16 Nov 2021 (09:25 IST)
Updated Date: Tue, 16 Nov 2021 (09:28 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳನ್ನು ಗೌರವದಿಂದಲೇ ಕಾಣುತ್ತಿದ್ದರು. ಆದರೆ ಇಂದು ಅವರ ನಮನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಿರುವುದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದೆ.
ಅರಮನೆ ಮೈದಾನದಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 2000 ಮಂದಿಗೆ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇವಲ ರಾಜಕೀಯ, ಸಿನಿಮಾ ಕ್ಷೇತ್ರದ ಗಣ್ಯರು ಮಾತ್ರ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ವಾಣಿಜ್ಯ ಮಂಡಳಿ ಸ್ಪಷ್ಟವಾಗಿ ಹೇಳಿದೆ.
ಇದರ ಬಗ್ಗೆ ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಬೇಸರ ಹೊರಹಾಕಿದ್ದಾರೆ. ನಮ್ಮ ಮೆಚ್ಚಿನ ಅಪ್ಪು ಅವರನ್ನು ಬೆಳೆಸಿದ್ದು ಅಭಿಮಾನಿಗಳು. ಅವರು ಯಾವತ್ತೂ ಅಭಿಮಾನಿಗಳನ್ನು ಆದರದಿಂದಲೇ ಕಾಣುತ್ತಿದ್ದರು. ಆದರೆ ಇಂದು ಅವರ ಕಾರ್ಯಕ್ರಮಕ್ಕೆ ನಮಗೆ ಪ್ರವೇಶ ಯಾಕಿಲ್ಲ ಎಂದು ಕೆಲವರು ಪ್ರಶ್ನಿಸಿದ್ದಾರೆ. ಆದರೆ ಎಲ್ಲರೂ ಕಾರ್ಯಕ್ರಮ ವೀಕ್ಷಿಸಲು ಟಿವಿ, ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿದೆ ಎಂದು ವಾಣಿಜ್ಯ ಮಂಡಳಿ ಹೇಳಿದೆ.