ಪ್ರೀತಿಯಲ್ಲಿ ಬಿದ್ದರಾ ನಟಿ ರಮ್ಯಾ : ಸ್ಯಾಂಡಲ್ ವುಡ್ ನಿರ್ಮಾಪಕನ ಜೊತೆ ಓಡಾಟದ ಬಗ್ಗೆ ಗುಸು ಗುಸು

Sampriya
ಮಂಗಳವಾರ, 2 ಜುಲೈ 2024 (17:41 IST)
photo Courtesy Instagram
ಬೆಂಗಳೂರು: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅವರು ಮತ್ತೇ ತಮ್ಮ ಪ್ರೀತಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. 41 ವರ್ಷವಾದರೂ ಇನ್ನೂ 18 ವರ್ಷದ ಹುಡುಗಿಯರಂತೆ ಕಾಣುವ ರಮ್ಯಾ ಇನ್ನೂ ಮದುವೆ ಯಾಕೆ ಆಗಿಲ್ಲ ಎಂಬ ಚಿಂತೆ ಅವರ ಅಭಿಮಾನಿಗಳಲ್ಲಿದೆ.

ಚಂದನವನದ ಕ್ವೀನ್ ಇದೀಗ ಪ್ರೀತಿಯಲ್ಲಿ ಬಿದ್ದಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಮ್ಯಾ ಅವರು ಭಾರತದ ಬೆಂಗಳೂರು ಮೂಲದ ಖ್ಯಾತ ಚಲನಚಿತ್ರ ನಿರ್ಮಾಪಕನ ಜತೆ ಲಿವಿಂಗ್ ರಿಲೇಷನ್‌ ಶಿಪ್‌ನಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನಿರ್ಮಾಪಕ ಜತೆ ರಮ್ಯಾ ಅವರಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿದ ಅವರ ಅಭಿಮಾನಿಗಳು ಅಂತು ಗುಡ್‌ ನ್ಯೂಸ್ ಕೊಟ್ರು ನಮ್‌ ಕ್ವೀನ್ ಎಂದು ಖುಷಿಯಾಗಿದ್ದಾರೆ. ಆದಷ್ಟು ಬೇಗ ಈ ಜೋಡಿ ಮದುವೆಯಾಗಿ ಸಿಹಿ ಸುದ್ದಿ ಕೊಡಲಿ ಹಾರೈಸುತ್ತಿದ್ದಾರೆ. ಇನ್ನೂ ಇನ್‌ಸ್ಟಾಗ್ರಾಂನಲ್ಲಿ ರಮ್ಯಾ ಅವರು ಯಾವುದೇ ಫೋಟೋವನ್ನು ಹಂಚಿಕೊಂಡಿಲ್ಲ. ಈ ಬಗ್ಗೆ ಯಾವುದೇ  ಸ್ಪಷ್ಟಣೆಯನ್ನು ಅವರು ನೀಡಿಲ್ಲ. ಆದರೂ ರಮ್ಯಾ ಪ್ರೀತಿ ಸುದ್ದಿ ಮಾತ್ರ ಸ್ಯಾಂಡಲ್‌ವುಡ್‌ನಲ್ಲಿ ಸಖತ್ ವೈರಲ್ ಆಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ಅವರು ಗೆಳೆಯನ ಜತೆ ಇರುವ ಫೋಟೋವನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments