ಬೆಂಗಳೂರು: ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದೆಂಬ ಕೋಪದಲ್ಲಿ ಅಭಿಮಾನಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜೀವಾವಧಿ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದವು.
 
									
			
			 
 			
 
 			
					
			        							
								
																	ಇನ್ನೂ ಪ್ರತಿಭಟನೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು.
									
										
								
																	ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ಮಾಜಿ ಶಾಸಕ ಜಿ ಎಚ್ ತಿಪ್ಪಾರೆಡ್ಡಿ ಅವರು, ದರ್ಶನ್ ನಿಜ ಜೀವನದಲ್ಲಿ ಹೀರೋ ಆಗಿಲ್ಲ. ಕೊಲೆಯಾದ ರೇಣುಕಾಸ್ವಾಮಿ ಅವರ ಪೋಷಕರು ಹಾಗೂ ಪತ್ನಿಯ ಕಣ್ಣೀರು ನೋಡಲಾಗುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಈ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಕಿಡಿಕಾರಿದರು.
									
											
							                     
							
							
			        							
								
																	ಇನ್ನೂ ಈ ಪ್ರಕರಣದಲ್ಲಿ ದರ್ಶನ್ ಅವರನ್ನು ಬಚಾವ್ ಮಾಡಲು ನಂಬರ್ 2 ಆರೋಪಿ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ ಏನೂ ಆಗಿಲ್ಲ ಎಂಬಂತೆ  ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಯಾವುದೇ ಕಾರಣಕ್ಕೂ ದರ್ಶನ್ ಅವರನ್ನು ಜೈಲಿಂದ ಬಿಡುಗಡೆ ಮಾಡಬಾರದು ಎಂದರು.
									
			                     
							
							
			        							
								
																	ಪ್ರಕರಣದಲ್ಲಿ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಿಡುಗಡೆ ಮಾಡಿದರೆ ದೊಡ್ಡ ಮಟ್ಟದ ಹೋರಾಟದ ಎಚ್ಚರಿಕೆ ನೀಡಿದರು.