ದರ್ಶನ್‌ ಬಿಡುಗಡೆ ಮಾಡಿದ್ದಲ್ಲಿ ಉಗ್ರ ಹೋರಾಟ: ಮಾಜಿ ಶಾಸಕ ಜಿ ಎಚ್‌ ತಿಪ್ಪಾರೆಡ್ಡಿ

sampriya
ಬುಧವಾರ, 12 ಜೂನ್ 2024 (17:09 IST)
Photo By X
ಬೆಂಗಳೂರು: ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದೆಂಬ ಕೋಪದಲ್ಲಿ ಅಭಿಮಾನಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜೀವಾವಧಿ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದವು.

ಇನ್ನೂ ಪ್ರತಿಭಟನೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು.

ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ಮಾಜಿ ಶಾಸಕ ಜಿ ಎಚ್‌ ತಿಪ್ಪಾರೆಡ್ಡಿ ಅವರು, ದರ್ಶನ್‌ ನಿಜ ಜೀವನದಲ್ಲಿ ಹೀರೋ ಆಗಿಲ್ಲ. ಕೊಲೆಯಾದ ರೇಣುಕಾಸ್ವಾಮಿ ಅವರ ಪೋಷಕರು ಹಾಗೂ ಪತ್ನಿಯ ಕಣ್ಣೀರು ನೋಡಲಾಗುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ ಈ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಕಿಡಿಕಾರಿದರು.

ಇನ್ನೂ ಈ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಚಾವ್‌ ಮಾಡಲು ನಂಬರ್‌ 2 ಆರೋಪಿ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ ಏನೂ ಆಗಿಲ್ಲ ಎಂಬಂತೆ  ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್‌ ಸೇರಿ ಎಲ್ಲ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಯಾವುದೇ ಕಾರಣಕ್ಕೂ ದರ್ಶನ್‌ ಅವರನ್ನು ಜೈಲಿಂದ ಬಿಡುಗಡೆ ಮಾಡಬಾರದು ಎಂದರು.

ಪ್ರಕರಣದಲ್ಲಿ ದರ್ಶನ್‌ ಹಾಗೂ ಇತರ ಆರೋಪಿಗಳನ್ನು ಬಿಡುಗಡೆ ಮಾಡಿದರೆ ದೊಡ್ಡ ಮಟ್ಟದ ಹೋರಾಟದ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments