Publish Date: Tue, 10 Aug 2021 (08:55 IST)
Updated Date: Tue, 10 Aug 2021 (09:18 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ನಡೆದ ವಿದ್ಯುತ್ ದುರಂತದಲ್ಲಿ ಫೈಟರ್ ವಿವೇಕ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಗುರು ದೇಶ್ ಪಾಂಡೆ ಸೇರಿದಂತೆ ಐವರು ವಿರುದ್ಧ ಬಿಡದಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಘಟನೆ ಬಳಿಕ ನಿರ್ಮಾಪಕ ಗುರುದೇಶ್ ಪಾಂಡೆ, ನಿರ್ದೇಶಕ ಶಂಕರ್ ರಾಜ ತಲೆಮರೆಸಿಕೊಂಡಿದ್ದಾರೆ. ಇವರ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.
ಎಫ್ ಐಆರ್ ನಲ್ಲಿ ನಿರ್ದೇಶಕ ಶಂಕರ್ ಎ1 ಆರೋಪಿಯಾದರೆ, ನಿರ್ಮಾಪಕ ಗುರುದೇಶ್ ಪಾಂಡೆ ಎ2 ಆರೋಪಿಯಾಗಿದ್ದಾರೆ. ಉಳಿದಂತೆ ಸಾಹಸ ನಿರ್ದೇಶಕ ವಿನೋದ್ ಕುಮಾರ್, ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್, ಕ್ರೇನ್ ಅಪರೇಟರ್ ಮಹದೇವ್ ವಿರುದ್ಧ ಪ್ರಕರಣ ದಾಖಲಾಗಿದೆ.