ಡ್ರಗ್ ಮಾಫಿಯಾ ಆರೋಪ ಮಾಡಿದ ಇಂದ್ರಜಿತ್, ಪ್ರಶಾಂತ್ ಸಂಬರಗಿ ವಿರುದ್ಧ ಫಿಲಂ ಚೇಂಬರ್ ಆಕ್ರೋಶ

Webdunia
ಬುಧವಾರ, 2 ಸೆಪ್ಟಂಬರ್ 2020 (13:23 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಇದೆ ಎಂದು ಆರೋಪ ಮಾಡಿದ ಇಂದ್ರಜಿತ್ ಲಂಕೇಶ್ ಹಾಗೂ ಅವರ ವಿರುದ್ಧ ಕಿಡಿ ಕಾರಿದ ಪ್ರಶಾಂತ್ ಸಂಬರಗಿ ವಿರುದ್ಧವೇ ಫಿಲಂ ಚೇಂಬರ್ ಆಕ್ಷೇಪ ವ್ಯಕ್ತಪಡಿಸಿದೆ.


ಇಂದ್ರಜಿತ್ ಲಂಕೇಶ್ ವಿನಾಕಾರಣ ಚಿರು ಸರ್ಜಾ ಹೆಸರನ್ನು ಉಲ್ಲೇಖಿಸಬಾರದಿತ್ತು. ಚಿರು ಹೆಸರು ಪ್ರಸ್ತಾಪ ಮಾಡಬಾರದಿತ್ತು. ಚಿತ್ರರಂಗದಲ್ಲಿ ಡ್ರಗ್ ಇದೆ ಎಂದೇ ನನಗೆ ಗೊತ್ತಿಲ್ಲ. ಒಂದು ವೇಳೆ ಯಾರಾದರೂ ತೆಗೆದುಕೊಂಡಿದ್ದರೆ ಅವರಿಗೆ ಶಿಕ್ಷೆಯಾಗಬೇಕು ಎಂದು ಸಭೆ ಬಳಿಕ ನಟ ದೊಡ್ಡಣ್ಣ ಹೇಳಿಕೆ ನೀಡಿದ್ದಾರೆ.

ಇನ್ನೊಂದೆಡೆ ಈ ಬಗ್ಗೆ ಕಾಮೆಂಟ್ ಮಾಡಿರುವ ಪ್ರಶಾಂತ್ ಸಂಬರಗಿ ವಿರುದ್ಧವೂ ಫಿಲಂ ಚೇಂಬರ್ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಶಾಂತ್ ಗೂ ಚಿತ್ರರಂಗಕ್ಕೂ ಸಂಬಂಧವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಪ್ರಶಾಂತ್ ಸಂಬರಗಿ ಇವರಿಗೆ ಚಿತ್ರ ರಂಗವನ್ನು ಸ್ವಚ್ಛ ಮಾಡುವ ತಾಕತ್ತಿಲ್ಲ. ಉಪೇಂದ್ರ, ಶಿವರಾಜ್ ಕುಮಾರ್, ಸಾರಾ ಗೋವಿಂದು ಅವರಂತಹವರು ನಾಯಕತ್ವ ಸಾಬೀತುಪಡಿಸಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments