ಮಹಾ ಕುಂಭ ಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾಗೆ ಸಿನಿಮಾ ನೀಡುವ ಮೂಲಕ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅವರು ಇದೀಗ ರೇಪ್ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಲದಲ್ಲಿ ಮೊನಾಲಿಸಾ ಕಣ್ಣೀರು ಹಾಕುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಇದು ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಅರೆಸ್ಟ್ ಮಾಡಿದ ಸಲುವಾಗಿ ಮೊನಾಲಿಸಾ ಕಣ್ಣೀರು ಹಾಕಿದ್ದಾಳೆ ಎನ್ನಲಾಗಿದೆ. ಆದರೆ ಇದುವರೆಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.
ನಿರ್ದೇಶಕ ಸನೋಜ್ ಮಿಶ್ರಾ ಮೇಲೆ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಳು. ಪ್ರಕರಣದ ಹಿನ್ನೆಲೆ ಸನೋಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಮೊನಾಲಿಸಾ ಅವರ ಕುಟುಂಬ ಸದಸ್ಯರು ಅವರನ್ನು ಅಪ್ಪಿಕೊಂಡು ಕಣ್ಣೀರು ಹಾಕುತ್ತಿರುವುದನ್ನು ಕಾಣಬಹುದು. ಈ ವೇಳೆ ಆಕೆಯನ್ನು ಅವರು ಸಮಾಧಾನ ಮಾಡಿದ್ದಾರೆ.
ಮಹಾಕುಂಭಮೇಳದಲ್ಲಿ ತನ್ನ ಸಹಜ ಸೌಂದರ್ಯದಿಂದ ವೈರಲ್ ಆಗಿದ್ದ ರುದ್ರಾಕ್ಷಿ ಮಾಲೆ ಮಾರುವ ಹುಡುಗಿ ಮೊನಲಿಸಾ ಎಂದೇ ಖ್ಯಾತಿ ಪಡೆದಳು. ಆಕೆಗೆ ಸಿಕ್ಕಾ ಪ್ರಚಾರದಿಂದ ನಿರ್ದೇಶಕ ಸನೋಜ್ ಮಿಶ್ರಾ ಅವರು ಆಕೆಗೆ ಸಿನಿಮಾ ಅವಕಾಶವನ್ನು ನೀಡಿ, ಸುದ್ದಿಯಾಗಿದ್ದರು. ಇದೀಗ ರೇಪ್ ಪ್ರಕರಣ ಸಂಬಂಧ ಅರೆಸ್ಟ್ ಆಗಿದ್ದಾರೆ.