ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚಿದ ಬೆನ್ನಲ್ಲೇ ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಮೂಲಕ ಮತ್ತೆ ನಿರ್ಬಂಧ ವಿಧಿಸಿತು. ಇದರಿಂದಾಗಿ ಕೆಲವು ಸಿನಿಮಾಗಳ ರಿಲೀಸ್ ಮುಂದೂಡಿಕೆಯಾಯಿತು.
ಆದರೆ ಈಗ ವೀಕೆಂಡ್ ಕರ್ಫ್ಯೂ ತೆರವಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಚಿತ್ರಮಂದಿಯೂ ನಮಗೂ ಶೇ.100 ರಷ್ಟು ಪ್ರೇಕ್ಷಕರ ಹಾಜರಾತಿಗೆ ಅವಕಾಶ ಕೊಡಿ ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.
ವ್ಯಾಕ್ಸಿನ್ ಆದ ಬಳಿಕವೂ, ಕೊರೋನಾ ಚೇತರಿಕೆ ಪ್ರಮಾಣ ಹೆಚ್ಚಿರುವಾಗಲೂ ಕರ್ಫ್ಯೂ ಮತ್ತಿತರ ನಿರ್ಬಂಧವೇಕೆ ಎಂಬ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ನಿಯಮ ಸಡಿಲಿಸಲು ಮುಂದಾಗಿದೆ. ಇಂದು ಈ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಇದರ ಬೆನ್ನಲ್ಲೇ ಚಿತ್ರರಂಗದ ಮಂದಿ ಥಿಯೇಟರ್ ಮೇಲಿನ ನಿರ್ಬಂಧ ತೆರವಿಗೂ ಮನವಿ ಮಾಡಿದ್ದಾರೆ. ಅದಕ್ಕೆ ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ ಎಂದು ಕಾದುನೋಡಬೇಕಿದೆ.