Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ನಲ್ಲಿ ಇಂದು ಬಿಡುಗಡೆಯಾಗುತ್ತಿರುವ ಸಿನಿಮಾಗಳು

ಸ್ಯಾಂಡಲ್ ವುಡ್ ನಲ್ಲಿ ಇಂದು ಬಿಡುಗಡೆಯಾಗುತ್ತಿರುವ ಸಿನಿಮಾಗಳು
ಬೆಂಗಳೂರು , ಶುಕ್ರವಾರ, 1 ಜುಲೈ 2022 (09:20 IST)
ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ಭೈರಾಗಿ ಸಿನಿಮಾವಲ್ಲದೆ ಸ್ಯಾಂಡಲ್ ವುಡ್ ನಲ್ಲಿ ಇಂದು ಮತ್ತಷ್ಟು ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳು ತೆರೆ ಕಾಣುತ್ತಿವೆ.

ಆ ಪೈಕಿ ಪ್ರಮುಖವಾಗಿ ವಿಂಡೋ ಸೀಟ್ ಕೂಡಾ ಬಿಡುಗಡೆಯಾಗುತ್ತಿದೆ. ನಿರೂಪಕಿಯಾಗಿ ಪ್ರೇಕ್ಷಕರಿಗೆ ಪರಿಚಯವಾಗಿದ್ದ ಶೀತಲ್ ಶೆಟ್ಟಿ ನಿರ್ದೇಶನ ಮಾಡಿರುವ ಸಿನಿಮಾ ವಿಂಡೋ ಸೀಟ್. ನಿರೂಪ್ ಭಂಡಾರಿ, ಅಮೃತಾ ಅಯ್ಯಂಗಾರ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈಗಾಗಲೇ ಟ್ರೈಲರ್ ನಿಂದ ಎಲ್ಲರ ಗಮನ ಸೆಳೆದಿದೆ.

ಇನ್ನು, ಹೊಸಬರ ಸಿನಿಮಾಗಳು ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿವೆ. ಇದೀಗ ಹೊಸ ಹೀರೋಗಳು ನಟಿಸಿರುವ ಕೆಎಂ ಚೈತನ್ಯ ನಿರ್ದೇಶನದ ‘ಅಬ್ಬಬ್ಬಾ’ ಎಂಬ ಪಕ್ಕಾ ಕಾಮಿಡಿ ಎಂಟರ್ ಟೈನರ್ ಸಿನಿಮಾ ಇಂದಿನಿಂದ ತೆರೆ ಕಾಣುತ್ತಿದೆ. ಈ ಸಿನಿಮಾದಲ್ಲಿ ಧನು ಆಚಾರ್, ಲಿಖಿತ್ ಶೆಟ್ಟಿ, ತಾಂಡವ್ ರಾಮ್ ನಾಯಕರಾಗಿದ್ದರೆ, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಣ್ಣ ಅಭಿಮಾನಿಗಳಲ್ಲಿ ಭೈರಾಗಿ ಜೋಶ್