ನವದೆಹಲಿ: ತಿಂಗಳ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಸಿನಿಮಾಗೆ ಕೊನೆಗೂ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ನಿಂದ ಬಿಡುಗಡೆಗೆ ಪ್ರಮಾಣ ಪತ್ರ ಸಿಕ್ಕಿದೆ.
ಚಿತ್ರದಲ್ಲಿ ಸಿಖ್ ಸಮುದಾಯದ ಬಗೆಗಿನ ನಿರೂಪಣೆ ಸೂಕ್ತವಾಗಿಲ್ಲ. ಐತಿಹಾಸಿಕ ಸಂಗತಿಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಿರೋಮಣಿ ಅಕಾಲಿ ದಳ ಸೇರಿದಂತೆ ಕೆಲ ಸಿಖ್ ಸಂಘಟೆಗಳು ಸಿನಿಮಾ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಇಲ್ಲದಿದ್ದರೆ ಈ ಸಿನಿಮಾ ಸೆಪ್ಟೆಂಬರ್ 6ರಂದೇ ದೊಡ್ಡ ಪರದೆ ಮೇಲೆ ಅಪ್ಪಳಿಸಬೇಕಿತ್ತು.ಸಿನಿಮಾಗೆ ಸಿಕ್ಕ ಪ್ರಮಾಣಪತ್ರದ ಬಗ್ಗೆ ನಟಿ ಕಂಗನಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
"ನಮ್ಮ ಚಲನಚಿತ್ರ ಎಮರ್ಜೆನ್ಸಿ ಪ್ರಮಾಣಪತ್ರವನ್ನು ಸ್ವೀಕರಿಸಿದ್ದೇವೆ" ಎಂದು ಘೋಷಿಸಲು ಕರೆದೊಯ್ದರು. "ನಾವು ಶೀಘ್ರದಲ್ಲೇ ಬಿಡುಗಡೆಯ ದಿನಾಂಕವನ್ನು ಘೋಷಿಸುತ್ತೇವೆ, ನಿಮ್ಮ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು" ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.