Publish Date: Fri, 11 Dec 2020 (16:48 IST)
Updated Date: Fri, 11 Dec 2020 (16:50 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಸಂಜನಾ ಗಲ್ರಾನಿಗೆ ಕೊನೆಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಸಂಜನಾರ ಮೂರು ತಿಂಗಳ ಜೈಲು ವಾಸ ಕೊನೆಯಾಗಿದೆ.
ಒಟ್ಟಾರೆ 85 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಂಜನಾಗೆ ಹೆಚ್ಚಿನ ವೈದ್ಯಕೀಯ ನೆರವು ಅಗತ್ಯವಿರುವುದರಿಂದ ಷರತ್ತುಬದ್ಧ ಜಾಮೀನು ನೀಡಲಾಗಿದೆ. ನ್ಯಾ. ಹರೀಶ್ ಕುಮಾರ್ ಅವರ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ನೀಡಿದೆ. ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿದ್ದು, 3,00,000 ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಲು ಸೂಚಿಸಲಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿಯೂ ವಿಚಾರಣೆಗೆ ಸಹಕರಿಸಬೇಕು ಮತ್ತು ಪಾಸ್ ಪೋರ್ಟ್ ಪೊಲೀಸರ ವಶಕ್ಕೊಪ್ಪಿಸಬೇಕು.