ಕೊನೆಗೂ ವಿಷಾಧ ವ್ಯಕ್ತಪಡಿಸಿದ ತಮಿಳು ನಟ ಸತ್ಯರಾಜ್

Webdunia
ಶುಕ್ರವಾರ, 21 ಏಪ್ರಿಲ್ 2017 (19:46 IST)
ಕಾವೇರಿ ಹೋರಾಟದ ವೇಳೆ ಅವಹೇಳನಕಾರಿ ಹೇಳಿಕೆ ಕುರಿತಂತೆ ತಮಿಳು ನಟ ಸತ್ಯರಾಜ್ ವಿಷಾಧ ವ್ಯಕ್ತಪಡಿಸಿದ್ದಾರೆ. 9 ವರ್ಷಗಳ ಹಿಂದೆ ಪ್ರತಿಭಟನೆ ವೇಳೆ ಆವೇಶದಿಂದ ಆಡಿದ ಮಾತನ್ನ ದೊಡ್ಡದು ಮಾಡಬೇಡಿ. ನಾನು ಕನ್ನಡ ವಿರೋಧಿಯಲ್ಲ  ಬಾಹುಬಲಿ-2 ಚಿತ್ರದ ಬಿಡುಗಡೆಗೆ ದಯವಿಟ್ಟು ಅವಕಾಶ ಮಾಡಿಕೊಡಿ ಎಂದು ಸತ್ಯರಾಜ್ ಮನವಿ ಮಾಡಿದ್ದಾರೆ.

ಯಾರೋ ಬರೆದುಕೊಟ್ಟ ಬರಹವನ್ನ ಪೇಪರ್ ಹಿಡಿದು ಸತ್ಯರಾಜ್ ಓದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಾವೇರಿ ಹೋರಾಟದಲ್ಲಿ ನಾನು ಯಾವಾಗಲೂ ತಮಿಳುನಾಡು ರೈತರ ಪರವಾಗಿಯೇ ಇರುತ್ತೇನೆ. ಒಬ್ಬ ತಮಿಳನಾಗಿ ಸಾಯಲು ಇಷ್ಟಪಡುತ್ತೇನೆ ಎಂದು ಸತ್ಯರಾಜ್ ಹೇಳಿದ್ದಾರೆ. ಇದೇ
ವೇಳೆ, ನಿಮಗೆ ನಷ್ಟವಾಗುತ್ತೆ ಎನ್ನುವುದಾದರೆ ನನಗೆ ನಿಮಗೆ ಅವಕಾಶ ಕೊಡಬೇಡಿ ಎಂದು ನಿರ್ದೇಶಕರು ಮತ್ತು ನಿರ್ಮಾಪಕರಿಗೆ ಸತ್ಯರಾಜ್ ತಿಳಿಸಿದ್ದಾರೆ.

ಸತ್ಯರಾಜ್ ವಿಡಿಯೋ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸತ್ಯರಾಜ್ ವಿಡಿಯೋ ಹೇಳಿಕೆ ಕುರಿತು ಪರಿಶೀಲನೆ ನಡೆಸಿ ಬಾಹುಬಲಿ ಚಿತ್ರ ಬಿಡುಗಡೆ ಬಗ್ಗೆ ನಾಳೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮುಂದಿನ ಸುದ್ದಿ
Show comments