Select Your Language

Notifications

webdunia
webdunia
webdunia
webdunia

ಕೊನೆಗೂ ವಿಷ್ಣು ಅಭಿಮಾನಿಗಳ ಬಹುದಿನಗಳ ಬೇಡಿಕೆಗೆ ಅಸ್ತು ಎಂದ ಸರ್ಕಾರ

ಡಾ.ವಿಷ್ಣುವರ್ಧನ್

Sampriya

ಬೆಂಗಳೂರು , ಗುರುವಾರ, 11 ಸೆಪ್ಟಂಬರ್ 2025 (18:37 IST)
Photo Credit X
ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ.ವಿಷ್ಣುವರ್ಧನ್ ಹಾಗೂ ನಟಿ ಬಿ ಸರೋಜಾದೇವಿಗೆ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ಘೋಷಣೆ ಮಾಡಿದೆ. 

ಹಲವು ವರ್ಷಗಳಿಂದ ನಟ ವಿಷ್ಣುವರ್ಧನ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬುದು ಅವರ ಅಭಿಮಾನಿಗಳ ಬಹುದಿನಗಳ ಕೋರಿಕೆಯಾಗಿತ್ತು. ಈ ವಿಚಾರವಾಗಿ ವಿಷ್ಣು ಪತ್ನಿ ಭಾರತಿ, ಮತ್ತು ಅಳಿಯ ಅನಿರುದ್ಧ್ ಅವರು ಸಿಎಂರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. 

ಇನ್ನೂ ಈಚೆಗೆ ವಿಷ್ಣು ಸ್ಮಾರಕ ನೆಲಸಮ ಮಾಡಿದ ವಿಚಾರದಲ್ಲಿ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಈ ವಿಚಾರ ಖುಷಿ ನೀಡಿದೆ. 

ಕನ್ನಡ ಸಿನಿಮಾ ರಂಗದಲ್ಲಿ ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ವಿಷ್ಣುವರ್ಧನ್‌ ಅವರ ಕೊಡುಗೆ ಅಪಾರವಾಗಿದೆ. 

ಅದೇ ರೀತಿ ಬಿ. ಸರೋಜಾದೇವಿ ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು. ಇಂದು (ಸೆಪ್ಟೆಂಬರ್ 11) ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.

ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆರೋಗ್ಯದಲ್ಲಿ ಏರುಪೇರು