Select Your Language

Notifications

webdunia
webdunia
webdunia
webdunia

ರಶ್ಮಿಕಾ ಡೀಪ್ ಫೇಕ್ ವಿಡಿಯೋ: ದೆಹಲಿ ಪೊಲೀಸರಿಂದ ಎಫ್ ಐಆರ್

ರಶ್ಮಿಕಾ ಡೀಪ್ ಫೇಕ್ ವಿಡಿಯೋ: ದೆಹಲಿ ಪೊಲೀಸರಿಂದ ಎಫ್ ಐಆರ್
ನವದೆಹಲಿ , ಶನಿವಾರ, 11 ನವೆಂಬರ್ 2023 (10:00 IST)
ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಡೀಪ್ ಫೇಕ್ ವಿಡಿಯೋ ಬಗ್ಗೆ ದೆಹಲಿ ವಿಶೇಷ ಪೊಲೀಸ್ ಸೆಲ್ ತನಿಖೆ ನಡೆಸಲಿದೆ. ಈ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ. ರಶ್ಮಿಕಾರ ನಕಲಿ ವಿಡಿಯೋ ಕ್ರಿಯೇಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟವರು ಯಾರು ಎಂದು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮಹಿಳಾ ಆಯೋಗ ಆಗ್ರಹಿಸಿತ್ತು.

ಇದರ ಬೆನ್ನಲ್ಲೇ ದೆಹಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಇದುವರೆಗೆ ಯಾರನ್ನೂ ಪೊಲೀಸರು ಬಂಧಿಸಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ಸ್ವೀಟ್ ರಾಧಿಕಾ ಜನ್ಮದಿನ