Publish Date: Mon, 15 Oct 2018 (15:30 IST)
Updated Date: Mon, 15 Oct 2018 (15:32 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್ ಮತ್ತು ಫ್ಲೇಕ್ಸ್ ಗಳನ್ನು ಹಾಕಿದ್ದ ಹಿನ್ನೆಲೆಯಲ್ಲಿ ನಟನ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚೆಗೆ ಹೈಕೋರ್ಟ್ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲೇಕ್ಸ್, ಬ್ಯಾನರ್ ನಿಷೇಧಿಸಲಾಗಿದೆ ಎಂಬುದಾಗಿ ಆದೇಶ ಹೊರಡಿಸಿದೆ. ಆದರೆ ನಟ ಧ್ರುವ ಸರ್ಜಾ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್ ಮತ್ತು ಫ್ಲೇಕ್ಸ್ ಗಳನ್ನು ಹಾಕಿದ್ದರು.
ಕಟೌಟ್ ನಲ್ಲಿ ಧ್ರುವ ಸರ್ಜಾ ಅವರ ಭಾವಚಿತ್ರ ಇರುವುದರಿಂದ ಕಾನೂನು ಉಲ್ಲಂಘನೆ ಆರೋಪದಡಿ ನಟನ ವಿರುದ್ಧ ಬನಶಂಕರಿ ಎಆರ್ ಒರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.