Select Your Language

Notifications

webdunia
webdunia
webdunia
webdunia

ಪ್ರೇಮ್ ರತನ್ ಧನ್ ಪಾಯೋ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಪ್ರೇಮ್ ರತನ್ ಧನ್ ಪಾಯೋ ಸಿನಿಮಾದ ಫಸ್ಟ್ ಲುಕ್ ರಿಲೀಸ್
, ಗುರುವಾರ, 1 ಅಕ್ಟೋಬರ್ 2015 (10:51 IST)
ಭಜರಂಗಿ ಭಾಯಿಜಾನ್ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಸಲ್ಮಾನ್ ಖಾನ್ ನಟಿಸುತ್ತಿರುವ ಸಿನಿಮಾಗಳಲ್ಲಿ ಒಂದು ಪ್ರೇಮ್ ರತನ್ ಧನ್ ಪಾಯೋ ಸಿನಿಮಾ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಲೇ ಇದೆ. ಹೀಗಿರುವಾಗಲೇ ಸಿನಿಮಾ ತಂಡ ಸಿನಿಮಾದ ಫಸ್ಟ್ ಲುಕ್ ಅನ್ನು ರಿಲೀಸ್ ಮಾಡಿದೆ.
ಟ್ವಿಟರ್ ನಲ್ಲಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಫಸ್ಟ್ ಲುಕ್ ನಲ್ಲಿ ಸಲ್ಮಾನ್ ಖಾನ್ ಹಾಗೂ ಸೋನಂ ಕಪೂರ್ ಅತ್ಯಂತ ರೋಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಸಿನಿಮಾದಲ್ಲಿ ಸಲ್ಲು ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇನ್ನು ಸೋನಂ ಮೈಥಿಲಿ ಎಂಬ ರಾಜಕುಮಾರಿಯ ಪಾತ್ತವನ್ನು ನಿರ್ವಹಿಸಲಿದ್ದಾರೆ.
 
ಸೂರಜ್ ಬಾರ್ ಜಾತ್ಯಾ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.ಈ ಹಿಂದೆ ಸಲ್ಲು ಹಾಗೂ ಸೋನಂ ಸಾವರಿಯಾ ಸಿನಿಮಾದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಈ ಜೋಡಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿರೋದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

Share this Story:

Follow Webdunia kannada