ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ಐತಿಹಾಸಿಕ ಪಾತ್ರವೊಂದಕ್ಕೆ ಜೀವತುಂಬಲಿದ್ದಾರೆ. ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಪುನೀತ್ ರುದ್ರನಾಗ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ದೊಡ್ಡ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, 500 ವರ್ಷಗಳ ಹಿಂದಿನ ಕಥೆ ಇದಾಗಿದೆ. ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ನಮ್ಮ ಸುರಮ್ ಮೂವೀಸ್ ಲಾಂಛನದಲ್ಲಿ ಇತ್ತೀಚೆಗೆ ತೆರೆಕಂಡ ʻನಿದ್ರಾದೇವಿ next doorʼ ಚಿತ್ರಕ್ಕೆ ತಾವು ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ.
ಈಗ ನಮ್ಮ ಸಂಸ್ಥೆಯಿಂದ ಮತ್ತೊಂದು ನೂತನ ಚಿತ್ರ ಆರಂಭವಾಗಲಿದೆ. ಪಿರಿಯಾಡಿಕ್ ಜಾನರ್ ನ ಈ ಚಿತ್ರದಲ್ಲಿ ಶ್ರೀಮುರಳಿ ಅವರು ನಾಯಕರಾಗಿ ನಟಿಸುತ್ತಿದ್ದಾರೆ. ಈವರೆಗೂ ಮಾಡಿರದ ಪಾತ್ರದಲ್ಲಿ ಶ್ರೀಮುರಳಿ ಕಾಣಿಸಿಕೊಳ್ಳಲಿದ್ದಾರೆ.