Webdunia - Bharat's app for daily news and videos

Install App

ಮರ ಕಡಿದ ಆರೋಪ: ಟಾಕ್ಸಿಕ್ ಸಿನಿಮಾ ತಂಡದ ಮೇಲೆ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆ

Sampriya
ಗುರುವಾರ, 5 ಡಿಸೆಂಬರ್ 2024 (19:29 IST)
ಸಿನಿಮಾಕ್ಕಾಗಿ ನೂರಾರು ಮರಗಳನ್ನು ಕಡಿಯಲಾಗಿದೆ ಎಂದು ಟಾಕ್ಸಿಕ್ ಸಿನಿಮಾ ನಿರ್ಮಾಪಕರ  ಮೇಲೆ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್​ ತಡೆ ನೀಡಿದೆ. ಈ ಮೂಲಕ ಸಿನಿಮಾದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್​ ನಿರಾಳರಾಗಿದ್ದಾರೆ.

ಅರಣ್ಯ ಇಲಾಖೆ ನೀಡಿದ ದೂರಿನಂತೆ ಟಾಕ್ಸಿಕ್ ಚಿತ್ರತಂಡ ಸಿನಿಮಾಕ್ಕಾಗಿ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಮಾನ್ಸಸ್ಟರ್ ಮೈಂಡ್ಸ್​ ವಿರುದ್ಧ ರಾಜ್ಯ ಅರಣ್ಯ ಇಲಾಖೆ ದೂರು ನೀಡಿತ್ತು. ದೂರು ಆಧರಿಸಿ ಎಫ್​ಐಆರ್ ಸಹ ದಾಖಲಾಗಿತ್ತು. ಇದೀಗ ಈ ಎಫ್​ಐಆರ್​ಗೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರಿನ ಹೊರವಲಯದಲ್ಲಿರುವ ಎಚ್​ಎಂಟಿಯ ಮೈದಾನದಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್​ ನಿರ್ಮಾಣ ಮಾಡಲಾಗಿತ್ತು. ಭಾರಿ ಮೊತ್ತದ ಹಣ ಖರ್ಚು ಮಾಡಿ ಬೃಹತ್ ಸೆಟ್ ಅನ್ನು ಇಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಈ ಸೆಟ್ ನಿರ್ಮಾಣ ಮಾಡಲು ಮೈದಾನದಲ್ಲಿದ್ದ ಮರಗಳನ್ನು ಅಕ್ರಮವಾಗಿ, ಯಾವುದೇ ಪೂರ್ವಾನುಮತಿ ಇಲ್ಲದೆ ಕಡಿಯಲಾಗಿದೆ ಎಂದು ಅರಣ್ಯ ಇಲಾಖೆ ಆರೋಪ ಮಾಡಿತ್ತು, ವಕೀಲರೊಬ್ಬರು ಸಹ ನ್ಯಾಯಾಲಯದಲ್ಲಿ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಹ ಸಲ್ಲಿಕೆ ಮಾಡಿದ್ದರು.

ಅದಲ್ಲದೆ ಸ್ವತಃ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರೇ ಸಿನಿಮಾ ಸೆಟ್‌ಗೆ ಭೇಟಿ ನೀಡಿ ಅಲ್ಲಿ ಪರಿಶೀಲನೆ ನಡೆಸಿದರು. ಅದಲ್ಲದೆ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments