Select Your Language

Notifications

webdunia
webdunia
webdunia
webdunia

ಕಷ್ಟದಲ್ಲಿದ್ದಾಗ ಬೆಂಬಲವಾಗಿ ನಿಂತ ನಿಷ್ಕಲ್ಮಶ ಹೃದಯಗಳಿಗೆ ಚಿರಋಣಿ: ನಿಮ್ಮ ದಾಸ ದರ್ಶನ್

Challenging star Darshan

Sampriya

ಬೆಂಗಳೂರು , ಮಂಗಳವಾರ, 18 ಫೆಬ್ರವರಿ 2025 (15:15 IST)
Photo Courtesy X
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಭಾನುವಾರ 48ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಪ್ರತಿವರ್ಷ ಅಭಿಮಾನಿಗಳ ಮಧ್ಯೆ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಡಿ ಬಾಸ್‌ ಈ ಬಾರಿ ಆಪ್ತರೊಂದಿಗೆ ಸಮಯ ಕಳೆದಿದ್ದಾರೆ.

ಚಿತ್ರರಂಗದ ತಾರೆಯರು ಸೇರಿದಂತೆ ಅಭಿಮಾನಿಗಳು ದರ್ಶನ್‌ ಜನ್ಮದಿನಕ್ಕೆ ಶುಭಾಶಯಗಳ ಸುರಿಮಳೆಗೈದಿದ್ದರು. ಶುಭಾಶಯಕ್ಕೆ ಪ್ರತಿಕ್ರಿಯಿಸಿರುವ ದರ್ಶನ್‌ ಅವರು, ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ ಎಂದು ಅಭಿಮಾನಿಗಳನ್ನು ಕೊಂಡಾಡಿದ್ದಾರೆ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ ಎಂದು ಇನ್‌ಸ್ಟಾಗ್ರಾಂನಲ್ಲಿ ಅವರು ಬರೆದುಕೊಂಡಿದ್ದಾರೆ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ.. ನಿಮ್ಮ ದಾಸ ದರ್ಶನ್ ಎಂದು ಬರೆದು, ಕುದುರೆಯೊಂದಿಗಿನ ಚಿತ್ರವನ್ನು ಶೇರ್‌ ಮಾಡಿದ್ದಾರೆ.

ನಿಮ್ಮನ್ನು ಪಡೆದ ನಾವು ಧನ್ಯ ಯಜಮಾನರೇ. ನಿಮ್ಮ ಜೊತೆ ಯಾವಾಗಲು ಸದಾ ಜೊತೆಯಾಗಿ ಇರುತೇವೆ. ಬಾಸ್ ಲವ್ ಯು ಫೋರೆವೆರ್ ಬಾಸ್ ಎಂದು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯೂಟ್ಯೂಬರ್‌ನ ಕೊಳಕು ಮನಸ್ಥಿತಿಯ ಹೇಳಿಕೆಗೆ ಕೆಂಡಾಮಂಡಲವಾದ ನ್ಯಾಯಮೂರ್ತಿ