ಮೆಲ್ಬೋರ್ನ್: ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆಗೆ ಕೆಲವು ದಿನ ಬಾಕಿಯಿದ್ದು, ಈಗ ಕ್ರಿಕೆಟ್ ಮೈದಾನಕ್ಕೂ ಅಪ್ಪು ಗಂಧದ ಗುಡಿ ಪೋಸ್ಟರ್ ತಲುಪಿದೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಮೆಲ್ಬೋರ್ನ್ ನಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದ ವೇಳೆ ಕೆಲವು ಕನ್ನಡಿಗ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಪೋಸ್ಟರ್ ಹಿಡಿದು ಟೀಂ ಇಂಡಿಯಾಗೆ ಚಿಯರ್ ಅಪ್ ಮಾಡಿದ್ದಾರೆ.
ಈ ಫೋಟೋಗಳನ್ನು ಯುವ ರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು ಖುಷಿಪಟ್ಟಿದ್ದಾರೆ.
-Edited by Rajesh Patil