Webdunia - Bharat's app for daily news and videos

Install App

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ʼಗಂಗೆ ಬಾರೆ ತುಂಗೆ ಬಾರೆʼ ಬೆಡಗಿ ಸುನೈನಾ

sampriya
ಶನಿವಾರ, 8 ಜೂನ್ 2024 (11:34 IST)
Photo By X
ಕನ್ನಡದಲ್ಲಿ ಪ್ರಜ್ವಲ್‌ ದೇವರಾಜ್‌ ಅಭಿನಯದ ʼಗಂಗೆ ಬಾರೆ ತುಂಗೆ ಬಾರೆʼ ಸಿನಿಮಾದಲ್ಲಿ ನಟಿಸಿದ್ದ ನಟಿ, ಮಾಡೆಲ್‌ ಸುನೈನಾ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ತಮಿಳಿನ 'ಕಾದಲಿಲ್ ವಿಝುಂತೇನ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸುನೈನಾ ಅವರು, ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ ಹೆಸರು ಗಳಿಸಿದ್ದಾರೆ.  ಈಚೆಗೆ ಇವರು  ತಮಿಳಿನಲ್ಲಿ 'ಇನ್‌ಸ್ಪೆಕ್ಟರ್ ರಿಷಿ' ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದಾರೆ.

2008ರಲ್ಲಿ ಪ್ರಜ್ವಲ್ ದೇವರಾಜ್ ನಟಿಸಿದ್ದ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾದಲ್ಲಿ ಗಂಗೆಯ ಪಾತ್ರದಲ್ಲಿ ಮಿಂಚಿದ್ದರು. ಇದೇ ಅವರ ಕೊನೆಯ ಕನ್ನಡ ಸಿನಿಮಾ.

ತಮ್ಮ ಇನ್‌ಸ್ಟಾಗ್ರಾಂನಲ್ಲಿ ರಿಂಗ್‌ ಧರಿಸಿ ಫೋಟೋ ಹಂಚಿಕೊಂಡಿದ್ದಾರೆ. ಆದರೆ ಹುಡುಗ ಯಾರೆಂಬ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಫೋಟೋ ಕೆಳಗಡೆ ಬರೆದುಕೊಂಡಿರುವ ಅವರು, ʼಹಾಯ್, ನನ್ನ ಕೊನೆಯ ಪೋಸ್ಟ್‌ಗೆ ಸಂಬಂಧಿಸಿದಂತೆ ಕೆಲವು ಲೇಖನಗಳನ್ನು ನಾನು ನೋಡಿದ್ದೇನೆ ಮತ್ತು ನಾನು ನಿಜ ಕೂಡಾ ಹೌಡು. ಖುಷಿಯಿಂದ ಇದನ್ನು ಸ್ಪಷ್ಟಪಡಿಸಲು ಇಷ್ಟಪಡುತ್ತೇನೆ.  ಬರುತ್ತಿರುವ ಎಲ್ಲಾ ಅದ್ಭುತ ಸಂದೇಶಗಳಿಗೆ ಧನ್ಯವಾದಗಳು, ಇದು ತುಂಬಾ ಅರ್ಥವಾಗಿದೆʼ ಎಂದು ಬರೆದುಕೊಂಡಿದ್ದಾರೆ.

ಅಭಿನಂದನಾ ಸಂದೇಶಗಳು ಹರಿದು ಬರುತ್ತಿದ್ದರೂ ಸಹ, ನಟಿ ಇನ್ನೂ ತನ್ನ ನಿಶ್ಚಿತಾರ್ಥವನ್ನು ಖಚಿತಪಡಿಸಿಲ್ಲ ಅಥವಾ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments