ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ: ಕಾಂಗ್ರೆಸ್ ಪರ ಪ್ರಚಾರ ಮಾಡ್ತಾರಾ ಶಿವಣ್ಣ

Krishnaveni K
ಶನಿವಾರ, 9 ಮಾರ್ಚ್ 2024 (09:06 IST)
Photo Courtesy: Twitter
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ್ದು ಶಿವಮೊಗ್ಗದಿಂದ ನಟ ಶಿವರಾಜ್ ಕುಮಾರ್ ಪತ್ನಿ, ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಗೆ ಟಿಕೆಟ್ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಶಿವಣ್ಣ ಚುನಾವಣಾ ಪ್ರಚಾರಕ್ಕೆ ಬರುವ ಸಾಧ್ಯತೆಯಿದೆ.

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಅವರ ಬಾವ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಲ್ಲದೆ, ರಾಹುಲ್ ಗಾಂಧಿ ಜೊತೆಯೂ ಚುನಾವಣಾ ರಾಲಿಯಲ್ಲಿ ವೇದಿಕೆ ಹಂಚಿಕೊಂಡಿದ್ದರು. ಈ ಬಗ್ಗೆ ಕೆಲವರು ಶಿವಣ‍್ಣನ ವಿರುದ್ಧ ಟೀಕೆ ಮಾಡಿದ್ದರು.

ಡಾ.ರಾಜ್ ಕುಟುಂಬ ಮೊದಲಿನಿಂದಲೂ ಯಾವುದೋ ಒಂದು ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡವರಲ್ಲ. ಆದರೆ ಶಿವಣ್ಣ ಕಾಂಗ್ರೆಸ್ ಪ್ರಚಾರ ಮಾಡಿದ್ದಕ್ಕೆ ನಿಮಗೆ ರಾಜಕೀಯ ಬೇಡ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಮೊನ್ನೆಯಷ್ಟೇ ಪತ್ನಿ ಗೀತಾರನ್ನು ಸಂಸದೆಯಾಗಿ ನೋಡುವ ಆಸೆಯಿದೆ ಎಂದು ಶಿವಣ್ಣ ಹೇಳಿದ್ದರು.

ಹೀಗಾಗಿ ಪತ್ನಿ ಪರವಾಗಿ ಶಿವಮೊಗ್ಗದಲ್ಲಿ ಪ್ರಚಾರ ನಡೆಸುವುದಂತೂ ಖಂಡಿತಾ. ಜೊತೆಗೆ ಇತರೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿಯೂ ಸ್ಟಾರ್ ಕಾಂಪೈನರ್ ಆಗಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ. ಚುನಾವಣೆ ಸಂದರ್ಭದಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳು ಸ್ಟಾರ್ ನಟರನ್ನು ಪ್ರಚಾರಕ್ಕೆ ಕರೆತರುವುದು ಸಾಮಾನ್ಯ. ಶಿವಣ್ಣ ಕೂಡಾ ಪ್ರಚಾರ ನಡೆಸಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments