Select Your Language

Notifications

webdunia
webdunia
webdunia
webdunia

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಚಿನ್ನ ಕಳ್ಳಸಾಗಣೆ ಪ್ರಕರಣ

Sampriya

ಬೆಂಗಳೂರು , ಮಂಗಳವಾರ, 2 ಸೆಪ್ಟಂಬರ್ 2025 (17:16 IST)
ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್‌ಗೆ ಇದೀಗ ಬಿಗ್‌ಶಾಕ್ ಕಾದಿದೆ. ಇದೀಗ ನಟಿಗೆ ₹102.55 ಕೋಟಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಹಿನ್ನೆಲೆ ಕನ್ನಡದ ನಟಿ ರನ್ಯಾರಾವ್‌ರನ್ನು ಪೊಲೀಸರು ಬಂಧಿಸಿದ್ದರು. 

ಈ ವೇಳೆ ಡಿಆರ್‌ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. DRI ತನಿಖೆಯಲ್ಲಿ, ರನ್ಯಾ ರಾವ್ ಸುಮಾರು 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಚಿನ್ನ ಕಳ್ಳಸಾಗಣೆ ಮಾಡಿದ್ದರು ಎಂದು ಬಹಿರಂಗಗೊಂಡಿತ್ತು.

ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ. ಇನ್ನು ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು (COFEPOSA) ಜಾರಿ ಮಾಡಲಾಗಿದ್ದು, ಈ ವಿಷಯವನ್ನು ನಿರ್ವಹಿಸುವ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್