Select Your Language

Notifications

webdunia
webdunia
webdunia
webdunia

Gold Smuggling Case: ರನ್ಯಾ ಜಾಮೀನು ಅರ್ಜಿ ವಜಾ, ನಟಿ ಪರ ವಕೀಲರ ವಾದ ಹೀಗಿತ್ತು

Gold Smuggling Case, Ranya Rao Case, Ranya Bail Rejected,

Sampriya

ಬೆಂಗಳೂರು , ಶುಕ್ರವಾರ, 14 ಮಾರ್ಚ್ 2025 (19:11 IST)
ಬೆಂಗಳೂರು: ದುಬೈನಿಂದ ಅಕ್ರಮವಾಗಿ 12ಕೋಟಿ ಮೌಲ್ಯದ ಚಿನ್ನವನ್ನು ಸಾಗಿಸುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಜೈಲೇ ಗತಿಯಾಗಿದೆ. ರನ್ಯಾ ಸಲ್ಲಿಸಿದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ನ್ಯಾ. ವಿಶ್ವನಾಥ್ ಸಿ. ಗೌಡರ್ ಅವರು ಅರ್ಜಿಯನ್ನು ವಿಚಾರಣೆ ನಡೆಸಿ ವಜಾಗೊಳಿಸಿದ್ದಾರೆ.

ಡಿಆರ್‌ಐ ಪರ ವಕೀಲರು ರನ್ಯಾಗೆ ಜಾಮೀನು ನೀಡಬಾರದು ಎಂದು ಪ್ರಬಲವಾಗಿ ವಾದ ಮಂಡಿಸಿದ್ದರು. ಈ ವಾದವನ್ನು ಕೋರ್ಟ್‌ ಪುರಸ್ಕರಿಸಿದೆ.

ನಟಿ ರನ್ಯಾ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿ, ಬಂಧನದ ವೇಳೆ ಡಿಆರ್‌ಐ‌ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಮಾಡಿಲ್ಲ ಎಂದು ಹೇಳಿದರು. ಹೆಣ್ಣು ಎಂದೂ ನೋಡದೇ ರಾತ್ರಿಯಿಡೀ ತನಿಖೆ ಮಾಡಿ ಮಾನಸಿವಾಗಿ ಹಿಂಸೆ ನೀಡುವ ಕೆಲಸವಾಗಿದೆ.

ಅರೆಸ್ಟ್ ಮೇಮೊ ಕೂಡ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ರನ್ಯಾ ಪಾತ್ರ ಇಲ್ಲ‌. ತನಿಖೆಗೆ ಸಹಕಾರ‌ ನೀಡುತ್ತಿದ್ದು, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಣ್ಣದೋಕುಳಿಯಲ್ಲಿ ಮಿಂದೆದ್ದ ಬಾಲಿವುಡ್‌ ಸೆಲೆಬ್ರಿಟಿಗಳು