ಮತ್ತೇ ಚಿತ್ರರಂಗಕ್ಕೆ ವಾಪಾಸ್ಸಾದ ಗೋಲ್ಡನ್ ಕ್ವೀನ್ ಅಮೂಲ್ಯ, ಬರ್ತಡೇ ದಿನ ಅಭಿಮಾನಿಗಳಿಗೆ ಡಬಲ್ ಧಮಾಕ

Sampriya
ಭಾನುವಾರ, 14 ಸೆಪ್ಟಂಬರ್ 2025 (13:37 IST)
Photo Credit X
ಬೆಂಗಳೂರು: ನಟಿ ಅಮೂಲ್ಯ ಅವರು ತಮ್ಮ ಬರ್ತಡೇ ದಿನ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಇವತ್ತು 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಗೋಲ್ಡನ್ ಕ್ವೀನ್ ಅವರು ಪೀಕಬೂ ಸಿನಿಮಾದ ಮೂಲಕ ಮತ್ತೇ ಚಿತ್ರರಂಗಕ್ಕೆ ವಾಪಾಸ್ಸಾಗಿದ್ದಾರೆ. 

ಈ ಸುದ್ದಿ ತಿಳಿದು ಅಮ್ಮು ಅಭಿಮಾನಿಗಳು ಫುಲ್ ಖುಷಿಯಾಗಿ, ಶುಭ ಹಾರೈಸುತ್ತಿದ್ದಾರೆ. 

ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವಾಗಲೇ ಅಮೂಲ್ಯ ಅವರು ಜಗದೀಶ್ ಅವರನ್ನು ಕೈಹಿಡಿದರು. ಮದುವೆ ಬಳಿಕ ಸಿನಿಮಾ ರಂಗದಿಂದ ಬ್ರೇಕ್ ಪಡೆದಿದ್ದರು. 2022ರಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದ ಅಮೂಲ್ಯ ಅವರು ಮಕ್ಕಳ
ಆರೈಕೆಯಲ್ಲೇ ಫುಲ್ ಬಿಸಿಯಾಗಿದ್ದರು. 

ಈಚೆಗೆ ಜೀ ಕನ್ನಡದಲ್ಲಿ ಶುರುವಾದ ನಾವು ನಮ್ಮವರು ರಿಯಾಲಿಟಿ ಶೋನಲ್ಲಿ ಜಡ್ಜ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಕಿರುತೆರೆಯ ರಿಯಾಲಿಟಿ ಶೋ ಜಡ್ಜ್‌ ಆಗಿ ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದರು. 

ಇದೀಗ ನಟಿ ಮತ್ತೇ ದೊಡ್ಡ ಪರದೆ ಮೇಲೆ ಬರುವ ಸುದ್ದಿ ಕೇಳಿ ಸಂಭ್ರಮಿಸಿದ್ದಾರೆ. ಬರ್ತಡೇ ದಿನದಂದು ಪೀಕಿಬೂ ಸಿನಿಮಾದ ಮೊದಲ ಟೀಸರ್‌ ಅನ್ನು ಬಿಡುಗಡೆ ಮಾಡಲಾಗಿದೆ. ದರಲ್ಲಿ ನಟಿ ಮುದ್ದಾಗಿ ಹೆಜ್ಜೆ ಹಾಕುತ್ತಿರುವುದನ್ನು ಕಾಣಬಹುದು.  ಇಂದು ಅವರಸಾಮಾಜಿಕ ಜಾಲತಾಣದಲ್ಲಿ ಮುದ್ದಿನ ಮಕ್ಕಳ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments