Publish Date: Tue, 28 Aug 2018 (08:54 IST)
Updated Date: Tue, 28 Aug 2018 (08:56 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರ ತಂದೆ ರಾಮಕೃಷ್ಣಪ್ಪ ಅನಾರೋಗ್ಯದ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮಕೃಷ್ಣಪ್ಪ (82) ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಅಡಕಮಾರನಹಳ್ಳಿಯವರಾದ ಗೋಲ್ಡನ್ ಸ್ಟಾರ್ ಕುಟುಂಬದವರು ಅಲ್ಲಿಯೇ ಮೃತರ ಅಂತ್ಯಕ್ರಿಯೆ ನಡೆಸಲಿದ್ದಾರೆ ಎನ್ನಲಾಗಿದೆ. ನಾಳೆ ಅಂತ್ಯ ಕ್ರಿಯೆ ನಡೆಯುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.