Select Your Language

Notifications

webdunia
webdunia
webdunia
webdunia

ಗೋಲ್ಡನ್ ಸ್ಟಾರ್ ಗಣೇಶ್ ಕೈಯಲ್ಲಿ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ!

ಗೋಲ್ಡನ್ ಸ್ಟಾರ್ ಗಣೇಶ್ ಕೈಯಲ್ಲಿ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ!
ಬೆಂಗಳೂರು , ಬುಧವಾರ, 7 ಜುಲೈ 2021 (10:20 IST)
ಬೆಂಗಳೂರು: ದೂದ್ ಪೇಡ ದಿಗಂತ್-ಐಂದ್ರಿತಾ ರೇ ಮದುವೆಯಾದ ಬಳಿಕ ಮೊದಲ ಬಾರಿಗೆ ತೆರೆ ಮೇಲೆ ಜೊತೆಯಾಗಿ ನಟಿಸಿರುವ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ತಂಡದಿಂದ ಹೊಸ ಸುದ್ದಿ ಬಂದಿದೆ.


ಈ ಸಿನಿಮಾದ ಮೊದಲ ಲಿರಿಕಲ್ ವಿಡಿಯೋ ಹಾಡು ಇಂದು ಮಧ್ಯಾಹ್ನ 1 ಗಂಟೆಗೆ ಬಿಡುಗಡೆಯಾಗುತ್ತಿದೆ. ಅದೂ ಗೋಲ್ಡನ್ ಸ್ಟಾರ್ ಗಣೇಶ್ ಈ ಹಾಡನ್ನು ಲಾಂಚ್ ಮಾಡಲಿದ್ದಾರೆ ಎಂದು ಚಿತ್ರತಂಡ ಘೋಷಿಸಿದೆ.

ಮಲೆನಾಡಿನ ಹಿನ್ನಲೆಯಲ್ಲಿ ನೈಜ ಘಟನೆಯನ್ನಾಧರಿಸಿದ ಚಿತ್ರಕತೆ ಹೊಂದಿರುವ ಸಿನಿಮಾ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ. ಈ ಸಿನಿಮಾದಲ್ಲಿ ದಿಗಂತ್ ಗೆ ಜೋಡಿಯಾಗಿ ಐಂದ್ರಿತಾ ಇದ್ದಾರೆ. ಅಲ್ಲದೆ, ಖ್ಯಾತ ಕಿರುತೆರೆ ನಟಿ ರಂಜಿನಿ ರಾಘವನ್ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗಾಗಲೇ ಇದರ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಚಾರಕ್ಕೆ ನಿಮಗೆ ಹಿಂದೂ ಸಂತರೇ ಬೇಕಾ? ಸೈಫ್ ಅಲಿಖಾನ್ ವಿರುದ್ಧ ಕಿಡಿ ಕಾರಿದ ನೆಟ್ಟಿಗರು