Publish Date: Thu, 21 Oct 2021 (10:03 IST)
Updated Date: Thu, 21 Oct 2021 (10:04 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಖತ್ ಸಿನಿಮಾ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.
ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿದ್ದು, ಅಕ್ಟೋಬರ್ 24 ರಂದು ಚಿತ್ರದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.
ಈ ವರ್ಷಾಂತ್ಯಕ್ಕೆ ಈ ಸಿನಿಮಾವೂ ತೆರೆಗೆ ಬರುವ ನಿರೀಕ್ಷೆಯಿದೆ. ಈಗಾಗಲೇ ಚಿತ್ರೀಕರಣ ಪೂರ್ತಿಯಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.