Webdunia - Bharat's app for daily news and videos

Install App

ಅಪ್ಪು ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಅಶ್ವಿನಿ ಬರೆದಿರುವ ಪುನೀತ್‌ ಬಯೋಗ್ರಫಿ ಶೀಘ್ರದಲ್ಲೇ ಬಿಡುಗಡೆ

Sampriya
ಮಂಗಳವಾರ, 18 ಮಾರ್ಚ್ 2025 (13:56 IST)
Photo Courtesy X
ಬೆಂಗಳೂರು: ದಿವಂಗತ ಪುನೀತ್‌ ರಾಜ್‌ಕುಮಾರ್ ಅವರ 50ನೇ ಜನ್ಮದಿನಾಚರಣೆ ಸೋಮವಾರ ನಡೆಯಿತು. ಅದರ ಬೆನ್ನಲ್ಲೇ ಅಪ್ಪು ಅಭಿಮಾನಿಗಳಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರು ಗುಡ್‌ನ್ಯೂಸ್‌ ನೀಡಿದ್ದಾರೆ.

2021 ಅಕ್ಟೋಬರ್‌ 29ರಂದು ಇಹಲೋಕ ತ್ಯಜಿಸಿದ ಪುನೀತ್‌ ರಾಜ್‌ಕುಮಾರ್‌ ಅವರ ನೆನಪು ಅಭಿಮಾನಿಗಳ ಮನದಲ್ಲಿ ಇನ್ನೂ ಹಸಿರಾಗಿದೆ. ಇದೀಗ ಪುನೀತ್ ರಾಜ್‌ಕುಮಾರ್ ಅವರ ಜೀವನ ಚರಿತ್ರೆ ಪುಸ್ತಕ ರೂಪದಲ್ಲಿ ಬರಲು ಸಿದ್ಧವಾಗುತ್ತಿದೆ. ಅಪ್ಪು ಹೆಸರಿನಲ್ಲೇ ಪುಸ್ತಕ ರಿಲೀಸ್‌ ಆಗಲಿದೆ.

ತೀವ್ರ ಕುತೂಹಲ ಕೆರಳಿಸಿರುವ ಅಪ್ಪು ಪುಸ್ತಕದ ಮುಖಪುಟವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ತನ್ನ ಇಬ್ಬರು ಪುತ್ರಿಯರಾದ ವಂದಿತಾ ಮತ್ತು ಧೃತಿ ಅವರೊಂದಿಗೆ ಬಿಡುಗಡೆಗೊಳಿಸಿದ್ದಾರೆ. ಈ ಕುರಿತ ಚಿತ್ರಗಳನ್ನು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.  ಅದರೊಂದಿಗೆ ಪ್ರಸ್ತುತಪಡಿಸುತ್ತಿದ್ದೇವೆ 'ಅಪ್ಪು' - ಅಪ್ಪುವಿನ ಭಾವನಾತ್ಮಕ ಜೀವನಚರಿತ್ರೆ... ಶೀರ್ಷಿಕೆ ನೀಡಿದ್ದಾರೆ.

ಪುನೀತ್ ಪತ್ನಿ ಅಶ್ವಿನಿ ಮತ್ತು ಪ್ರಕೃತಿ ಬನವಾಸಿ ಜೊತೆಯಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಇದಕ್ಕಾಗಿ 2 ವರ್ಷಗಳ ಕಾಲ ಶ್ರಮಿಸಿದ್ದಾರೆ. ಸದ್ಯ ಬುಕ್‌ನ ಕವರ್ ಪೇಜ್ ಹೇಗಿದೆ ಎಂಬುದನ್ನು ಪುನೀತ್‌ ಜನ್ಮದಿನದಂದು ಸೋಮವಾರ ಅಶ್ವಿನಿ ರಿವೀಲ್ ಮಾಡಿದ್ದಾರೆ. ಅಪ್ಪು ಬಯೋಗ್ರಫಿ ಬರಲಿರುವ ಸುದ್ದಿ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments