ಪುನೀತ್ ಅಭಿಮಾನಿಗಳಿಗೆ ಗುಡ್ ನ್ಯೂಸ್!

Webdunia
ಸೋಮವಾರ, 22 ನವೆಂಬರ್ 2021 (10:28 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಇನ್ನು ದುಃಖದಿಂದ ಹೊರ ಬಂದಿಲ್ಲ.
ಇಂದು ಸಹ ಸಮಾಧಿ ಸ್ಥಳಕ್ಕೆ ಆಗಮಿಸಿ ಅಗಲಿದ ನಟನಿಗೆ ನಮನಗಳಲ್ಲಿ ಸಲ್ಲಿಸಲಾಗುತ್ತದೆ. ಭಾನುವಾರ ಬೆಂಗಳೂರು ಪೊಲೀಸರು ಅಪ್ಪು ಸ್ಮರಣಾರ್ಥ ಸೈಕಲ್ ಜಾಥಾ ನಡೆಸಿದ್ದರು.
ಕಳೆದ ವರ್ಷ ಕೊರೊನಾದಿಂದಾಗಿ ಲಾಲ್ ಬಾಗ್ ನಲ್ಲಿ ನಡಯುವ ಫಲಪುಷ್ಟ  ಪ್ರದರ್ಶನ ರದ್ದುಗೊಂಡಿತ್ತು. ಕೊರೊನಾ ಪಸರಿಸುವ ಪ್ರಮಾಣ ಕಡಿಮೆಯಾದ ಹಿನ್ನೆಲೆ ಜನವರಿಯಲ್ಲಿ ಫಲಪುಷ್ಟ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಟ ಪ್ರದರ್ಶನ ಅಪ್ಪು ಅಭಿಮಾನಿಗಳಿಗೆ ವಿಶೇಷವಾಗಿರಲಿದೆ.
ಗಣರಾಜ್ಯೋತ್ಸವ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಷ್ಟ ಪ್ರದರ್ಶನ ನಡೆಸಲಾಗುತ್ತದೆ. ಈ ಬಾರಿ ಅಪ್ಪು  ಅವರನ್ನ ಫಲಪುಷ್ಟ ಪ್ರದರ್ಶನದಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ. ಈ ಬಾರಿ ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರ ಜೀವನ ಚರಿತ್ರೆ ಫಲಪುಷ್ಟಗಳಲ್ಲಿ ಅರಳಲಿದೆ. ಈ ಮೂಲಕ ತಾರೆಗಳಿಗೆ ಲಾಲ್ ಬಾಗ್ ಸಸ್ಯೋದ್ಯಾನ ಪುಷ್ಟ ನಮನ ಸಲ್ಲಿಸಲಿದೆ.  ಬಗೆ ಬಗೆಯ ಹೂಗಳಲ್ಲಿ ಇಬ್ಬರು ತಾರೆಯರು ಅರಳಲಿದ್ದಾರೆ.
ಇಬ್ಬರು ತಾರೆಯರಿಗೂ ಪುಷ್ಟ ನಮನ ಸಲ್ಲಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.  ಈ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಸಭೆಗಳು ನಡೆಯುತ್ತಿವೆ. ಪುಷ್ಟಗಳಲ್ಲಿ ಅರಳುವ ಪುನೀತ್ ಮತ್ತು ಡಾ.ರಾಜ್ ಕುಮಾರ್ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಖು ಕಾಯುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ಮಂಡಳಿ ಸಹ ಪುನೀತ ನಮನ ಕಾರ್ಯಕ್ರಮ ಆಯೋಜಿಸುವ ಮೂಲಕ ಅಗಲಿದ ಯುವರತ್ನನಿಗೆ ಶ್ರದ್ಧಾಂಜಲಿ ಸಲ್ಲಿಸಿತ್ತು. ಎಲ್ಲ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ಮುಖಂಡರು ಸಹ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments