Webdunia - Bharat's app for daily news and videos

Install App

ಮಾರ್ಚ್ 2 ರಿಂದ ಒಟಿಟಿಗೆ ಹನುಮಾನ್: ಎಲ್ಲಿ ವೀಕ್ಷಿಸಬೇಕು ಮಾಹಿತಿ ಇಲ್ಲಿದೆ

Krishnaveni K
ಸೋಮವಾರ, 19 ಫೆಬ್ರವರಿ 2024 (15:17 IST)
Photo Courtesy: Twitter
ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಹನುಮಾನ್ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಮಾರ್ಚ್ 2 ರಿಂದ ಒಟಿಟಿಯಲ್ಲಿ ಹನುಮಾನ್ ಸಿನಿಮಾ ರಿಲೀಸ್ ಆಗುತ್ತಿದೆ.

ಪ್ರಶಾಂತ್ ವರ್ಮಾ ನಿರ್ದೇಶನದ ಥಿಯೇಟರ್ ನಲ್ಲಿ ಬಿಡುಗಡೆಯಾಗಿ 300 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು. ಮೆಗಾಸ್ಟಾರ್ ಚಿರಂಜೀವಿಯಿಂದ ಹಿಡಿದು ಘಟಾನುಘಟಿ ತಾರೆಯರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ವರ್ಷದ ಮೊದಲ ಬ್ಲಾಕ್ ಬ್ಲಸ್ಟರ್ ಸಿನಿಮಾ ಎಂದರೂ ತಪ್ಪಾಗಲಾರದು. ಈ ಸಿನಿಮಾವೀಗ ಒಟಿಟಿಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಬಿಡುಗಡೆಯಾಗಿ 55 ದಿನಗಳ ನಂತರ ಒಟಿಟಿಯಲ್ಲಿ ಬಿಡುಗಡೆ ಮಾಡುವುದಾಗಿ ಒಪ್ಪಂದವಾಗಿತ್ತು. ಅದರಂತೆ ಮಾರ್ಚ್ 2 ರಿಂದ ಹನುಮಾನ್ ಸಿನಿಮಾ ಒಟಿಟಿ ಫ್ಲ್ಯಾಟ್ ಫಾರಂ ಜೀ5 ನಲ್ಲಿ ಪ್ರಸಾರ ಆರಂಭಿಸಲಿದೆ. ಥಿಯೇಟರ್ ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಒಟಿಟಿಗೆ ಲಗ್ಗೆಯಿಡುತ್ತಿದೆ.

ಹನುಮಾನ್ ಭರ್ಜರಿ ಯಶಸ್ಸಿನ ಹಿನ್ನಲೆಯಲ್ಲಿ ಚಿತ್ರತಂಡ ಪಾರ್ಟ್ 2 ನಿರ್ಮಿಸಲು ಹೊರಟಿದೆ. ಎರಡನೇ ಭಾಗದಲ್ಲಿ ಪ್ರಮುಖ ತಾರೆಯರೂ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿದೆ. ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಆಂಜನೇಯನ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿಯಿತ್ತು. ಬಳಿಕ ಅವರೇ ನಾನಾಗಿಯೇ ಹೇಳುವವರೆಗೂ ಯಾವ ಸುದ್ದಿಗಳನ್ನೂ ನಂಬಬೇಡಿ ಎನ್ನುವ ಮೂಲಕ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments